ಸಾರಾಂಶ
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ೨೦ ವರ್ಷಗಳ ಕಠಿಣ ಕಾರಾವಾಸ ಶಿಕ್ಷೆ ಹಾಗೂ ₹ ೧.೩೦ ಲಕ್ಷ ದಂಡ ವಿಧಿಸಿ ಹಾವೇರಿ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.ತಡಸ ಗ್ರಾಮದ ಮಣಿಕಂಠ ಧರ್ಮಪ್ಪ ವಾಲಿಕಾರ ಎಂಬಾತ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ 2020ರ ಮಾ. ೧೫ ರಂದು ಅಪಹರಣಮಾಡಿಕೊಂಡು ಹೋಗಿ, ರಾಣಿಬೆನ್ನೂರು ತಾಲೂಕಿನ ಅಸುಂಡಿ ಗ್ರಾಮದ ಮನೆಯಲ್ಲಿ ಹಾಗೂ ತಡಸ ಗ್ರಾಮದ ಹೊಲದಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಜೀವ ತೆಗೆಯುವುದಾಗಿ ಜೀವ ಬೆದರಿಕೆ ಹಾಕಿದ ಅಪರಾಧಕ್ಕಾಗಿ ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಹಾನಗಲ್ ವೃತ್ತದ ತನಿಖಾಧಿಕಾರಿ ಸಿಪಿಐ ಎಸ್.ಆರ್. ಗಣಾಚಾರಿ ಪ್ರಕರಣದ ತನಿಖೆ ನಡೆಸಿ ದೋಷರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಕನ್ನಡಪ್ರಭ ವಾರ್ತೆ ಹಾವೇರಿ

ಆರೋಪಿ ಮಣಿಕಂಠ ಧರ್ಮಪ್ಪ ವಾಲಿಕಾರ ಮೇಲೆ ಹೊರಿಸಲಾದ ಆಪಾದನೆ ರುಜುವಾತು ಆಗಿದೆ. ನ್ಯಾಯಾಧೀಶ ನಿಂಗೌಡ ಪಾಟೀಲ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದ್ದು, ದಂಡದ ಹಣದಲ್ಲಿ ನೊಂದ ಬಾಲಕಿಗೆ ₹1 ಲಕ್ಷ ಪರಿಹಾರ ಹಾಗೂ ಕರ್ನಾಟಕ ಸರ್ಕಾರದ ನೊಂದವರ ಪರಿಹಾರ ನಿಧಿ ಯೋಜನೆಯಡಿ ಪರಿಹಾರ ನಿಧಿಯಿಂದ ನೊಂದ ಬಾಲಕಿಗೆ ₹ 4 ಲಕ್ಷ ಪರಿಹಾರ ನೀಡಬೇಕೆಂದು ಎಂದು ತೀರ್ಪಿನಲ್ಲಿ ತಿಳಿಸಿದ್ದಾರೆ.ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವಿಜಯಕುಮಾರ ಶಂಕರಗೌಡ ಪಾಟೀಲ್ ಪ್ರಕರಣ ನಡೆಸಿ ವಾದ ಮಂಡಿಸಿದ್ದರು.