ಹುಬ್ಬಳ್ಳಿ: ಹಿಂದೂ ಯುವತಿಗೆ ನಶೆ ಬರುವ ನೀರು ಕೊಟ್ಟು ಲೈಂಗಿಕ ದೌರ್ಜನ್ಯ ನಡೆಸಿರುವ ಸಮೀರ್ ಮುಲ್ಲಾ ಹಾಗೂ ಅವರ ಕುಟುಂಬದ್ದು ಹಿಂದೂ ಹುಡುಗಿಯರನ್ನು ಲವ್ ಜಿಹಾದ್ ಮಾಡುವ ಹುನ್ನಾರ ಎಂಬುದು ಮೇಲ್ನೋಟಕ್ಕೆ ತಿಳಿಯುತ್ತದೆ. ಹೀಗಾಗಿ, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆಗ್ರಹಿಸಿದರು.
ಭಾನುವಾರ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಯುವತಿ ಮನೆಗೆ ಭೇಟಿ ನೀಡಿ, ಪಾಲಕರಿಂದ ಮಾಹಿತಿ ಪಡೆದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ಈ ಯುವಕ ಕೇವಲ ಇದೊಂದೆ ಹುಡುಗಿಯಲ್ಲದೆ, ಬೇರೆ ಬೇರೆ ಹುಡುಗಿಯರಿಗೂ ಇದೇ ತರಹ ಮಾಡಿದ್ದಾನೆ ಎಂಬುದು ತಿಳಿದು ಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಮುಸ್ಲಿಂ ಓಲೈಕೆಯಿಂದ ಇಂತಹ ಮೊಂಡು ಧೈರ್ಯ ಬಂದಿದೆ. ನಾವು ಏನು ಮಾಡಿದರೂ ನಡೆಯುತ್ತದೆ ಎಂಬ ಭಾವನೆ ಯುವಕರಲ್ಲಿ ಬಂದಿದೆ. ಹೀಗಾಗಿ, ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು. ಬೆದರಿಕೆ ಹಾಕಿದವರನ್ನು ಕೂಡಲೇ ಬಂಧಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ವೆಂಕಟೇಶ ಕಾಟವೆ, ರಂಗಾ ಕಠಾರೆ, ರಾಜು ಕೋರ್ಯಾಣಮಠ ಸೇರಿದಂತೆ ಹಲವರಿದ್ದರು.