ಈತ ಹನೂರು ತಾಲೂಕಿನ ಕುರುಬರದೊಡ್ಡಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ವಿದ್ಯಾರ್ಥಿಗಳಿಗೆ ನೀಡುವ ಆಹಾರ ಪದಾರ್ಥಗಳನ್ನು ಪಡೆಯಲು ಬಾಲಕನ ತಾಯಿ ಬಂದಿದ್ದಾಗ ಬೇರೊಂದು ಕೊಠಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದನು.
ಕನ್ನಡಪ್ರಭ ವಾರ್ತೆ ಹನೂರು
ವಿದ್ಯಾರ್ಥಿಯೊಬ್ಬನ ತಾಯಿಗೆ ಶಾಲೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿ ಶಿಕ್ಷಕನಿಗೆ ಕೊಳ್ಳೇಗಾಲ ಅಪರ ಜಿಲ್ಲಾ ಮತ್ತು ಸೇಷನ್ಸ್ ನ್ಯಾಯಾಲಯವು 3 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದೆ. ಅಪರಾಧಿ ವೆಂಕಟನಾರಾಯಣ ಶಿಕ್ಷೆಗೊಳಗಾದ ಶಿಕ್ಷಕ. ಈತ ಹನೂರು ತಾಲೂಕಿನ ಕುರುಬರದೊಡ್ಡಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ವಿದ್ಯಾರ್ಥಿಗಳಿಗೆ ನೀಡುವ ಆಹಾರ ಪದಾರ್ಥಗಳನ್ನು ಪಡೆಯಲು ಬಾಲಕನ ತಾಯಿ ಬಂದಿದ್ದಾಗ ಬೇರೊಂದು ಕೊಠಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಾಕ್ಷ್ಯಾಧಾರಗಳಿಂದ ಅಪರಾಧ ಸಾಬೀತಾದ ಹಿನ್ನೆಲೆ ಅಪರ ಜಿಲ್ಲಾ ಮತ್ತು ಸೇಷನ್ಸ್ ನ್ಯಾಯಾಧೀಶ ಟಿ.ಸಿ.ಶ್ರೀಕಾಂತ್ 3 ವರ್ಷಗಳ ಕಠಿಣ ಶಿಕ್ಷೆ, 10 ಸಾವಿರ ರು. ದಂಡ ವಿಧಿಸಿ ಆದೇಶಿಸಿದ್ದಾರೆ.