ಸಾರಾಂಶ
10 ಸಾವಿರ ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದರೆ 1 ತಿಂಗಳು ಹೆಚ್ಚುವರಿ ಸಾದಾ ಕಾರಾಗೃಹ ಶಿಕ್ಷೆ
ಶಿವಮೊಗ್ಗ: ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪ ಸಾಬೀತಾದ ಹಿನ್ನೆಲೆ ಯುವಕಗೆ ಶಿವಮೊಗ್ಗದ ಎಫ್‌ಟಿಎಸ್‌ಸಿ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.
2021ರಲ್ಲಿ ಶಿಕಾರಿಪುರದಲ್ಲಿ 3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಾಲಕಿ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ್ದ ಶಿವಮೊಗ್ಗ ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಜೆ.ಲಕ್ಷ್ಮಣ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆರೋಪ ಸಾಬೀತಾದ ಹಿನ್ನೆಲೆ ವಿಚಾರಣೆ ನಡೆಸಿದ ಶಿವಮೊಗ್ಗದ ಎಫ್‌ಟಿಎಸ್‌ಸಿ ನ್ಯಾಯಾಲಯದ ನ್ಯಾಯಧೀಶೆ ಲತಾ ಅವರು ಅಪರಾಧಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹10 ಸಾವಿರ ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದರೆ 1 ತಿಂಗಳು ಹೆಚ್ಚುವರಿ ಸಾದಾ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ. ಸರ್ಕಾರದ ಪರವಾಗಿ ಅಭಿಯೋಜಕರಾದ ಹರಿಪ್ರಸಾದ್ ಮತ್ತು ಮಮತಾ ವಾದ ಮಂಡಿಸಿದ್ದರು.