ಸಾರಾಂಶ
2023ರಲ್ಲಿ ತಾಲೂಕು ಆಸ್ಪತ್ರೆಗೆ ಮಹಿಳಾ ವೈದ್ಯೆ ಕರ್ತವ್ಯಕ್ಕೆ ಸೇರಿದ್ದರು. ಕರ್ತವ್ಯಕ್ಕೆ ಸೇರಿದ ದಿನದಿಂದಲೇ ಡಾ.ರಾಬರ್ಟ್ ರೆಬೆಲ್ಲೋ ಮೊಬೈಲ್‌ನಲ್ಲಿ ಅಶ್ಲೀಲ ಸಂದೇಶ ರವಾನಿಸಲು ಆರಂಭಿಸಿದ್ದರು. ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿ, ಮಾನಸಿಕ ಹಿಂಸೆ ನೀಡುತ್ತಿದ್ದರು.
ಉಡುಪಿ: ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ವಿರುದ್ಧ ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಕುರಿತು ದೂರು ದಾಖಲಾಗಿದ್ದು, ವೈದ್ಯಾಧಿಕಾರಿಯನ್ನು ವಜಾಗೊಳಿಸಲಾಗಿದೆ
.ವೈದ್ಯಾಧಿಕಾರಿ, ಕಳೆದ ಆರು ತಿಂಗಳಿನಿಂದ ತಾಲೂಕು ಆಸ್ಪತ್ರೆಯ ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ಆರೋಪಿಸಲಾಗಿದೆ.2023ರಲ್ಲಿ ತಾಲೂಕು ಆಸ್ಪತ್ರೆಗೆ ಮಹಿಳಾ ವೈದ್ಯೆ ಕರ್ತವ್ಯಕ್ಕೆ ಸೇರಿದ್ದರು.
ಕರ್ತವ್ಯಕ್ಕೆ ಸೇರಿದ ದಿನದಿಂದಲೇ ಡಾ.ರಾಬರ್ಟ್ ರೆಬೆಲ್ಲೋ ಮೊಬೈಲ್‌ನಲ್ಲಿ ಅಶ್ಲೀಲ ಸಂದೇಶ ರವಾನಿಸಲು ಆರಂಭಿಸಿದ್ದರು. ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿ, ಮಾನಸಿಕ ಹಿಂಸೆ ನೀಡುತ್ತಿದ್ದರು. ವೀಡಿಯೋ ಕಾಲ್ ಮಾಡಿಯೂ ಕಿರುಕುಳ ನೀಡುತ್ತಿದ್ದರೆಂದು ಮಹಿಳಾ ವೈದ್ಯೆ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪ ಹಿನ್ನೆಲೆ ವೈದ್ಯಾಧಿಕಾರಿಯನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಆದೇಶ ನೀಡಿದ್ದಾರೆ.