ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರುನಾಯಿ ಮುದ್ದು ಮಾಡುವ ನೆಪದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಜ್ಞಾನಭಾರತಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಉಲ್ಲಾಳದ 25 ವರ್ಷದ ಸಂತ್ರಸ್ತೆ ನೀಡಿದ ದೂರಿನನ್ವಯ ಜ್ಞಾನಭಾರತಿ ಠಾಣೆ ಪೊಲೀಸರು, ಅಪರಿಚಿತ ವ್ಯಕ್ತಿ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆ ಮೇಲೆ ಉದ್ದೇಶಪೂರ್ವಕವಾಗಿ ಹಲ್ಲೆ, ಕಳ್ಳತನದ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸಂತ್ರಸ್ತೆ ವೃತ್ತಿಯಲ್ಲಿ ವಕೀಲೆಯವಾಗಿದ್ದು, ಉಲ್ಲಾಳದ ಉಪಕಾರ್ ಲೇಔಟ್‌ನಲ್ಲಿ ನ. 7ರಂದು ರಾತ್ರಿ 10.30ರ ಸುಮಾರಿಗೆ ತಮ್ಮ ಶ್ವಾನದ ಜತೆ ವಾಯುವಿಹಾರಕ್ಕೆ ಹೋಗಿದ್ದರು. ಆಗ ಎದುರು ಬಂದ ಅಪರಿಚಿತ ವ್ಯಕ್ತಿ, ನಿಮ್ಮ ನಾಯಿಯನ್ನು ಮುಟ್ಟಬಹುದೆ ಎಂದು ಕೇಳಿದ್ದಾನೆ. ಅದಕ್ಕೆ ಸಂತ್ರಸ್ತೆ ಮುಟ್ಟಲು ಅನುಮತಿ ನೀಡಿದ್ದರು. ಬಳಿಕ ನಾಯಿ ಜತೆ ಮಾತನಾಡುತ್ತಿದ್ದ. ಆತ ನಂತರ ಸಂತ್ರಸ್ತೆ ಮನೆಗೆ ತೆರಳಲು ಮುಂದಾದಾಗ ಏಕಾಏಕಿ ಆಕೆಯ ದೇಹ ಸ್ಪರ್ಶಿಸಿದ್ದಾನೆ. ಗಾಬರಿಗೊಂಡ ಯುವತಿ ಆರೋಪಿಯನ್ನು ತಳ್ಳಿ ಪ್ರತಿರೋಧವೊಡ್ಡಿದ್ದರು. ನಂತರವೂ ಆರೋಪಿ ಕಿರುಕುಳ ನೀಡಲು ಯತ್ನಿಸಿದಾಗ ಕಪಾಳಕ್ಕೆ ಹೊಡೆದಿದ್ದಾರೆ. ಬಳಿಕ ರಕ್ಷಣೆಗಾಗಿ ಜೋರಾಗಿ ಕಿರುಚಲಾರಂಭಿಸಿದಾಗ, ಕೆಳಕ್ಕೆ ಬಿದ್ದ ತನ್ನ ಮೊಬೈಲ್ ಕದ್ದು ಆರೋಪಿ ಪರಾರಿಯಾಗಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ಘಟನೆ ನಡೆದ ಸ್ಥಳದ ಸುತ್ತ-ಮುತ್ತಲಿನ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಆರೋಪಿಗಾಗಿ ಹುಡುಕಾಟ ನಡೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.;Resize=(128,128))
;Resize=(128,128))
;Resize=(128,128))
;Resize=(128,128))