ಸಾರಾಂಶ
ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸರ್ಕಾರದ ನಿಯಮ ಮೀರಿ ಹಣ ವಸೂಲಿಗೆ ಮುಂದಾದರೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೌನವಾಗಿರುವುದೇಕೆ ಎಂದು ಸಮಿತಿ ಪ್ರಶ್ನಿಸಿದೆ.
ಕನ್ನಡಪ್ರಭ ವಾರ್ತೆ ಗಂಗಾವತಿ
ನಗರ ಸೇರಿದಂತೆ ತಾಲೂಕಿನಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಅಧಿಕ ಮಟ್ಟದಲ್ಲಿ ಡೊನೇಷನ್ ಪಡೆಯುತ್ತಿದ್ದು, ಇದನ್ನು ನಿಯಂತ್ರಿಸಬೇಕು ಎಂದು ಒತ್ತಾಯಿಸಿ ಎಸ್ಎಫ್ಐ ತಾಲೂಕು ಘಟಕ ಕ್ಷೇತ್ರ ಶಿಕ್ಷಣಾಧಿಕಾರಿ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದೆ.ಈ ಕುರಿತು ಸಮಿತಿ ರಾಜ್ಯಾಧ್ಯಕ್ಷ ಅಮರೇಶ ಗಡಗದ ಮಾತನಾಡಿ. 2024 25ನೇ ಸಾಲಿನ ಪ್ರವೇಶ ಶುಲ್ಕ, ಬಟ್ಟೆ, ಶೂ ಸಾಕ್ಸ್, ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್ ಶುಲ್ಕ, ಟ್ಯೂಷನ್ ಶುಲ್ಕವನ್ನು ಹೆಚ್ಚಿಗೆ ಮಾಡಿ ಡೊನೇಷನ್ ವಸೂಲಿ ಮಾಡಲು ಮುಂದಾಗಿದೆ.ಬಹುತೇಕ ಎಲ್ಲ ಶಾಲೆಗಳಲ್ಲಿ ಈಗಾಗಲೇ ಬೇಬಿ ಕ್ಲಾಸಿನಿಂದ ಎಲ್ಲ ತರಗತಿಯ ಪ್ರವೇಶಾತಿ ಪ್ರಾರಂಭಿಸಿ ವಿದ್ಯಾರ್ಥಿಗಳ ಪಾಲಕರಿಂದ ಡೊನೇಷನ್ ವಸೂಲಿಗೆ ಮುಂದಾಗಿವೆ. ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸರ್ಕಾರದ ನಿಯಮ ಮೀರಿ ಹಣ ವಸೂಲಿಗೆ ಮುಂದಾದರೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೌನವಾಗಿರುವುದೇಕೆ ಎಂದು ಸಮಿತಿ ಪ್ರಶ್ನಿಸಿದೆ.
ಕೂಡಲೇ ಶಾಲೆಗಳ ಮೇಲೆ ಕಾನೂನು ಕ್ರಮ ಜರುಗಿಸಿ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ರೇಗುಲೇಟಿಂಗ್ ಪ್ರಾಧಿಕಾರ ರಚಿಸಿ ಶಾಲೆಗಳ ಮೇಲೆ ಕ್ರಮ ಜರುಗಿಸಬೇಕು ಹಾಗೂ ಸಂಘಟನೆಯ ಮುಖಂಡರನ್ನು ಒಳಗೊಂಡಂತೆ ಜಂಟಿ ಸಭೆ ಸೇರಬೇಕೆಂದು ಒತ್ತಾಯಿಸಿದರು.ಈ ಮನವಿ ಸಲ್ಲಿಸುವ ವೇಳೆ ತಾಲೂಕು ಅಧ್ಯಕ್ಷರಾದ ಗ್ಯಾನೇಶ್ ಕಡಗದ, ಮುಖಂಡರಾದ ನಾಗರಾಜು. ಮಂಜುನಾಥ್, ಬಸಯ್ಯ, ಪಂಪಾಪತಿ ವಕೀಲರು. ಬಸವರಾಜ್ ಇತರರು ಇದ್ದರು.