ಎರಡು ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳೊಂದಿಗೆ ಜೋಡಿಸುವ ಹಾಗೂ ಕೆಪಿಎಸ್ ಶಾಲೆಗಳ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಯೋಜನೆ ಹಿಂಪಡೆಯಲು ಆಗ್ರಹಿಸಿ ಶುಕ್ರವಾರ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.
ರಾಣಿಬೆನ್ನೂರು: ಎರಡು ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳೊಂದಿಗೆ ಜೋಡಿಸುವ ಹಾಗೂ ಕೆಪಿಎಸ್ ಶಾಲೆಗಳ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಯೋಜನೆ ಹಿಂಪಡೆಯಲು ಆಗ್ರಹಿಸಿ ಶುಕ್ರವಾರ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಮುನ್ಸಿಪಲ್ ಕ್ರೀಡಾಂಗಣದಿಂದ ಹಲಗೇರಿ ಕ್ರಾಸ್ವರೆಗೆ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ಶಿಕ್ಷಣ ನೀತಿಯ ವಿರುದ್ಧ ಘೋಷಣೆಗಳನ್ನು ಕೂಗಿದರು. ರಾಜ್ಯ ಸರ್ಕಾರವು ಎರಡು ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳೊಂದಿಗೆ ಜೋಡಿಸುವ ಹಾಗೂ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಶಾಲೆಗಳ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಯೋಜನೆಯನ್ನು ಜಾರಿಗೆ ತರಲು ಮುಂದಾಗಿರುವುದನ್ನು ವಿರೋಧಿಸಿ ಈ ಯೋಜನೆಯನ್ನು ತಕ್ಷಣವೇ ಹಿಂಪಡೆಯಬೇಕು ಎಂದರು ಆಗ್ರಹಿಸಿದರು. ನಂತರ ಬಿಇಒ ಅವರಿಗೆ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಜಿಲ್ಲಾಧ್ಯಕ್ಷ ಅರುಣ್ಕುಮಾರ್ ನಗವತ್ ಮಾತನಾಡಿ, ಸರ್ಕಾರಿ ಶಾಲೆಗಳು ಬಡವರು, ರೈತರು, ಕಾರ್ಮಿಕರು, ದಲಿತರು, ಹಿಂದುಳಿದವರು ಹಾಗೂ ಸಾಮಾನ್ಯ ಕುಟುಂಬಗಳ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಪ್ರಮುಖ ಕೇಂದ್ರಗಳಾಗಿವೆ. ಇಂತಹ ಸರ್ಕಾರಿ ಶಾಲೆಗಳನ್ನು ಬಲಪಡಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕು. ಆದರೆ ರಾಜ್ಯ ಸರ್ಕಾರವು ಎರಡು ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳೊಂದಿಗೆ ಜೋಡಿಸುವ ಹಾಗೂ ಕೆಪಿಎಸ್ ಶಾಲೆಗಳ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಯೋಜನೆಗೆ ಮುಂದಾಗಿರುವುದು ಶಿಕ್ಷಣದ ಹಕ್ಕು ಮತ್ತು ಸರ್ಕಾರಿ ಶಿಕ್ಷಣ ವ್ಯವಸ್ಥೆಯ ಭವಿಷ್ಯದ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಅನೇಕ ಸರ್ಕಾರಿ ಶಾಲೆಗಳು ಶಿಕ್ಷಕರ ಕೊರತೆ, ಕೊಠಡಿಗಳ ಅಭಾವ, ಶೌಚಾಲಯಗಳ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳ ಕೊರತೆಯನ್ನು ಎದುರಿಸುತ್ತಿವೆ. ಇಂತಹ ಸಮಸ್ಯೆಗಳನ್ನು ಪರಿಹರಿಸಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಬದಲು ಶಾಲೆಗಳನ್ನು ವಿಲೀನಗೊಳಿಸುವ ಅಥವಾ ಖಾಸಗಿ ಸಂಸ್ಥೆಗಳೊಂದಿಗೆ ಜೋಡಿಸುವ ಪ್ರಯತ್ನಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ ಎಂದರು.ವಿದ್ಯಾರ್ಥಿಗಳಾದ ಪವಿತ್ರ ಲಮಾಣಿ, ಮನ್ವಿತಾ ಲಮಾಣಿ, ರೋಜಾ ಬಾರ್ಕಿ, ಲಲಿತ ಮೇಕ್ಕಿ, ಸೌಂದರ್ಯ ಗುತ್ತಲ, ಪೂಜಾ ರಾಮಾವತ, ಪ್ರಿಯಾಂಕಾ ಲಮಾಣಿ, ವೈಭವ ಲಮಾಣಿ, ತನ್ಮಯ ಪೂಜಾರ, ಶರತ್ ಧೋಲೆಹಳ್ಳಿ, ಮನೋಹರ ಅನ್ವರೀ, ರಾಹುಲ್ ಛಲವಾದಿ, ದರ್ಶನ ಗಂಗಪ್ಪನವರ, ತರುಣ ಕಾರ್ಕಳ, ಪ್ರದೀಪ್ ಗುತ್ತಲ, ಅಜಯ್ ಕೊಂಡಜ್ಜಿ, ಚೇತನ್ ಸರ್ವಂದ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.