ಛತ್ರಪತಿ ಶಿವಾಜಿ ಮಹಾರಾಜರ ತಂದೆ ಷಹಜಿ ರಾಜೇ ಬೋಸ್ಲೆ ಅವರ 362ನೇ ಪುಣ್ಯರಾಧನೆ ಕಾರ್ಯಕ್ರಮವನ್ನು ತಾಲೂಕಿನ ಹೊದಿಗೆರೆ ಗ್ರಾಮದಲ್ಲಿರುವ ಷಹಜಿ ರಾಜೇ ಬೋಸ್ಲೆ ಸ್ಮಾರಕದ ಬಳಿ ಜ.23ರಂದು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಮರಾಠ ಸಮಾಜ ಅಧ್ಯಕ್ಷ ಎಂ.ಬಿ. ಶಿವಾಜಿರಾವ್ ತಿಳಿಸಿದ್ದಾರೆ.

ಚನ್ನಗಿರಿ: ಛತ್ರಪತಿ ಶಿವಾಜಿ ಮಹಾರಾಜರ ತಂದೆ ಷಹಜಿ ರಾಜೇ ಬೋಸ್ಲೆ ಅವರ 362ನೇ ಪುಣ್ಯರಾಧನೆ ಕಾರ್ಯಕ್ರಮವನ್ನು ತಾಲೂಕಿನ ಹೊದಿಗೆರೆ ಗ್ರಾಮದಲ್ಲಿರುವ ಷಹಜಿ ರಾಜೇ ಬೋಸ್ಲೆ ಸ್ಮಾರಕದ ಬಳಿ ಜ.23ರಂದು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಮರಾಠ ಸಮಾಜ ಅಧ್ಯಕ್ಷ ಎಂ.ಬಿ. ಶಿವಾಜಿರಾವ್ ತಿಳಿಸಿದ್ದಾರೆ.

ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಮಠದ ಭವಾನಿ ದತ್ತಪೀಠದ ಶ್ರೀ ಮಂಜುನಾಥ ಭಾರತಿ ಮಹಾಸ್ವಾಮೀಜಿ ವಹಿಸುವರು. ಅಧ್ಯಕ್ಷತೆಯನ್ನು ಸ್ಮಾರಕ ಅಭಿವೃದ್ಧಿ ಸೇವಾ ಸಂಸ್ಥೆ ಅಧ್ಯಕ್ಷ ವೈ.ಮಲ್ಲೇಶ್ ರಾವ್ ಶಿಂಧೆ ವಹಿಸುವರು ಎಂದಿದ್ದಾರೆ.

ಮುಖ್ಯ ಅತಿಥಿಗಳಾಗಿ ದಾವಣಗೆರೆ ಲೋಕಸಭಾ ಕ್ಷೇತ್ರ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಜಿಲ್ಲಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳೆ, ಕಲಘಟಗಿ ವಿಧಾನಸಭಾ ಕ್ಷೇತ್ರ ಶಾಸಕ ಸಂತೋಷ್ ಲಾಡ್, ಮಾಜಿ ಮಂತ್ರಿ ಪಿಜಿಆರ್ ಸಿಂಧ್ಯಾ, ಶಾಸಕ ಬಸವರಾಜು ವಿ. ಶಿವಗಂಗಾ, ಹಾನಗಲ್ ಕ್ಷೇತ್ರದ ಶಾಸಕ ಶ್ರೀನಿವಾಸ್ ರಾವ್ ಮಾನೆ, ಖಾನಾಪುರ ಕ್ಷೇತ್ರದ ಶಾಸಕ ವಿಠಲ್ ಹಲ್ಗೆಕರ್, ವಿ.ಪ. ಸದಸ್ಯ ರಾದ ಎಂ.ಜಿ. ಮಾರುತಿ ರಾವ್, ಡಿ.ಎಸ್. ಅರುಣ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜಿನೀಶ್, ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ, ಕೆ.ಪಿ.ಸಿ.ಸಿ. ವಕ್ತಾರ ಹೊದಿಗೆರೆ ರಮೇಶ್, ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

- - -