ಸಾರಾಂಶ
ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಕೊಡಮಾಡುವ ಬಂಟ್ವಾಳ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪಾಣೆಮಂಗಳೂರು ಎಸ್ಎಲ್‌ಎನ್‌ಪಿ ವಿದ್ಯಾಲಯದ ಶಿಕ್ಷಕಿ ಶೈಲಜಾ ಬಿ. ರೈ ಆಯ್ಕೆಯಾಗಿದ್ದಾರೆ.ಇವರು 18 ವರ್ಷಗಳಿಂದ ಈ ಸಂಸ್ಥೆಯಲ್ಲಿ ಸಮಾಜ ವಿಜ್ಞಾನ ಹಾಗೂ ಇಂಗ್ಲೀಷ್ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಗಳೂರು
ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಕೊಡಮಾಡುವ ಬಂಟ್ವಾಳ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪಾಣೆಮಂಗಳೂರು ಎಸ್ಎಲ್‌ಎನ್‌ಪಿ ವಿದ್ಯಾಲಯದ ಶಿಕ್ಷಕಿ ಶೈಲಜಾ ಬಿ. ರೈ ಆಯ್ಕೆಯಾಗಿದ್ದಾರೆ.ಇವರು 18 ವರ್ಷಗಳಿಂದ ಈ ಸಂಸ್ಥೆಯಲ್ಲಿ ಸಮಾಜ ವಿಜ್ಞಾನ ಹಾಗೂ ಇಂಗ್ಲೀಷ್ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪಠ್ಯೇತರ ಚಟುವಟಿಕೆಗಳಲ್ಲಿ ತುಂಬಾ ಆಸಕ್ತಿ ಉಳ್ಳವರಾಗಿದ್ದು ಸುಮಾರು 14 ವರ್ಷಗಳ ಕಾಲ ಬುಲ್ ಬುಲ್ ಶಿಕ್ಷಕಿಯಾಗಿ ಅನೇಕ ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿ ರಾಜ್ಯ ಪುರಸ್ಕಾರ ಪ್ರಶಸ್ತಿ ಪಡೆಯುವಂತೆ ಮಾಡಿದ್ದಾರೆ.
ಇವರು ಉತ್ತಮ ಕಾರ್ಯಕ್ರಮ ನಿರೂಪಕರೂ ಆಗಿದ್ದಾರೆ. ತನ್ನ ವಿದ್ಯಾರ್ಥಿಗಳಲ್ಲಿ ಭಾಷಣ, ಪರಿಸರ ಸಂರಕ್ಷಣೆ, ದೇಶಪ್ರೇಮ, ಧರ್ಮದ ಅರಿವಿನ ಬಗ್ಗೆ ಜಾಗೃತಿ ಮೂಡಿಸಲು ಅನೇಕ ಕಾರ್ಯಕ್ರಮಗಳನ್ನು ಶಾಲಾ ಮುಖ್ಯ ಶಿಕ್ಷಕಿ ಹಾಗೂ ಸಹಶಿಕ್ಷಕರ ಜೊತೆ ನಡೆಸುತ್ತಾ ಬಂದಿದ್ದಾರೆ. ಇವರು ಸಾಲೆತ್ತೂರಿನ ಪಡೆಕುಂಜ ನಿವಾಸಿ, ಎಸ್‌ಆರ್‌ಡಿಸಿಸಿ ಬ್ಯಾಂಕ್ ಪ್ರಬಂಧಕ ಬಾಲಕೃಷ್ಣ ರೈ ಅವರ ಪತ್ನಿ................
ಸುಪ್ರಿಯಾಗೆ ‘ವಿದ್ಯಾರತ್ನ’ ಪ್ರಶಸ್ತಿಕರ್ನಾಟಕ ರಾಜ್ಯ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಕೊಡಮಾಡುವ ರಾಜ್ಯ ಮಟ್ಟದ ‘ವಿದ್ಯಾರತ್ನ’ ಪ್ರಶಸ್ತಿಗೆ ಮಾಣಿ ಪೆರಾಜೆ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕಿ ಸುಪ್ರಿಯಾ ಡಿ. ಭಾಜನರಾಗಿದ್ದಾರೆ.ಸೋಮವಾರ ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು.ಕಳೆದ 15 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಇವರು ಪಠ್ಯ ಮಾತ್ರವಲ್ಲದೇ ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿಯನ್ನು ಹೊಂದಿದ್ದಾರೆ. ಕಳೆದ 8 ವರ್ಷಗಳಿಂದ ಗೈಡ್ ಕ್ಯಾಪ್ಟನ್ ಆಗಿರುವ ಸುಪ್ರಿಯಾ ಅವರು ಅನೇಕ ವಿದ್ಯಾರ್ಥಿಗಳನ್ನು ತರಬೇತುಗೊಳಿಸಿ ರಾಜ್ಯ ಪುರಸ್ಕಾರ ಪಡೆಯುವಂತೆ ಮಾಡಿದ್ದಾರೆ. ರಾಜ್ಯಮಟ್ಟದ ಕವಿ ಕಾವ್ಯ ಕಮ್ಮಟದಲ್ಲಿ ಕವನ ವಾಚನ ಮಾಡಿ ಪುರಸ್ಕೃತರಾಗಿದ್ದಾರೆ.ಕನ್ನಡ ಸ್ನಾತಕೋತ್ತರ ಪದವೀಧರೆಯಾಗಿರುವ ಇವರು, ಮಂಗಳೂರಿನ ಜೆಪ್ಪು ನಿವಾಸಿಯಾಗಿದ್ದು, ಇವರ ಪತಿ ವಸಂತ ಕುಮಾರ್ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿದ್ದಾರೆ.