ಶಕ್ತಿ ವಿದ್ಯಾಸಂಸ್ಥೆ ವಾರ್ಷಿಕ ಕ್ರೀಡಾಕೂಟ ಸಂಪನ್ನ

| Published : Oct 15 2025, 02:08 AM IST

ಸಾರಾಂಶ

ಮಂಗಳೂರಿನ ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ ಮಂಗಳ ಕ್ರೀಡಾಂಗಣದಲ್ಲಿ ನಡೆಯಿತು.

ಮಂಗಳೂರು: ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ ಮಂಗಳಕ್ರೀಡಾಂಗಣದಲ್ಲಿ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾಗಿರುವ ಪ್ರದೀಪ್ ಡಿಸೋಜಾ ಅವರು ಶಕ್ತಿ ವಿದ್ಯಾ ಸಂಸ್ಥೆಯ ಶಾಲಾ ದ್ವಜಾರೋಹಣವನ್ನು ನೆರವೇರಿಸಿದರು.

ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್ ಕೆ ಮಾತನಾಡಿ, ನಮ್ಮ ಶಾಲಾ ಕ್ರೀಡಾ ಶಿಕ್ಷಕರ ತರಬೇತಿಯಿಂದ ಸಾಕಷ್ಟು ವಿದ್ಯಾರ್ಥಿಗಳು ವಿದ್ಯಾಭಾರತೀಯ ವತಿಯಿಂದ ಅನೇಕ ಸ್ಪರ್ಧಾ ಕೂಟಗಳಲ್ಲಿ ಭಾಗವಹಿಸಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ನಮ್ಮ ಶಾಲೆಯನ್ನು ಪ್ರತಿನಿಧಿಸಿದ್ದಾರೆ. ನಮ್ಮ ಸಂಸ್ಥೆಯ ಸಂಸ್ಥಾಪಕರಾದ ಡಾ ಕೆ ಸಿ ನಾಕ್ ಅವರು ಕ್ರೀಡಾ ಕ್ಷೇತ್ರಕ್ಕೆ ಬೇಕಾದ ಸಕಲ ಸೌಲಭ್ಯವನ್ನು ನೀಡುತ್ತಾ ಬಂದಿದ್ದಾರೆ ಎಂದರು.

ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್, ಶಕ್ತಿ ಪದವಿ ಪೂರ್ವ ಕಾಲೇಜು ಉಪ ಪ್ರಾಂಶುಪಾಲ ನಟೇಶ್ ಆಳ್ವ ಇದ್ದರು. ವಿದ್ಯಾರ್ಥಿಗಳಾದ ಕೀರ್ತನಾ ಬೇಕಲ್, ಸಾಗರ್, ದೇಹಿಕಾ, ಸಿದ್ಧಿವಿನಾಯಕ್ ಭಟ್, ವಿವಾನ ಸಾಗರ್ ಶೆಟ್ಟಿ ಅವರು ಕ್ರೀಡಾಜ್ಯೋತಿಯನ್ನು ಅತಿಥಿಗಳಿಗೆ ಹಸ್ತಾಂತರಿಸಿದರು. ಅಗ್ನಿ ವಾಯು, ಜಲ, ಪೃಥ್ವಿ ನಾಮಾಂಕಿತ ದಳಗಳಲ್ಲಿ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಿತು. ಹರ್ಷಿತ ಕ್ರೀಡಾ ಪ್ರತಿಜ್ಞೆಯನ್ನು ವಾಚಿಸಿದರು. ಅಶ್ವಿನಿ ಅಂಚನ್ ಸ್ವಾಗತಿಸಿದರು. ಶಿಕ್ಷಕಿ ಚೇತನ ತಲಪಾಡಿ ನಿರೂಪಿಸಿ ವಂದಿಸಿದರು.