ಸಾರಾಂಶ
ಕಾಂಗ್ರೆಸ್ ಸರ್ಕಾರ ಅನುಷ್ಠಾನ ಮಾಡುತ್ತಿರುವ ಪಂಚ ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆಯಡಿ ರಾಜ್ಯದ ಸಾರಿಗೆ ಬಸ್‌ನಲ್ಲಿ ₹500 ಕೋಟಿ ಪ್ರಯಾಣ ಮಾಡಿದ್ದು, ಇದರಿಂದ ಮಹಿಳೆಯರಿಗೆ ಅನುಕೂಲವಾಗಿದೆ ಎಂದು ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.
ಕನ್ನಡಪ್ರಭ ವಾರ್ತೆ ರಾಮದುರ್ಗ
ಕಾಂಗ್ರೆಸ್ ಸರ್ಕಾರ ಅನುಷ್ಠಾನ ಮಾಡುತ್ತಿರುವ ಪಂಚ ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆಯಡಿ ರಾಜ್ಯದ ಸಾರಿಗೆ ಬಸ್‌ನಲ್ಲಿ ₹500 ಕೋಟಿ ಪ್ರಯಾಣ ಮಾಡಿದ್ದು, ಇದರಿಂದ ಮಹಿಳೆಯರಿಗೆ ಅನುಕೂಲವಾಗಿದೆ ಎಂದು ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.ಪಟ್ಟಣದ ಹಳೆಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯಲ್ಲಿ ಐದು ನೂರು ಪ್ರಯಾಣದ ಹಿನ್ನೆಲೆಯಲ್ಲಿ ಬಸ್ ಪೂಜೆ ನೆರವೇರಿಸಿ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ದುಡಿಯುವ ಮಹಿಳೆಯರಿಗೆ, ಸಣ್ಣ ಪುಟ್ಟ ವ್ಯಾಪಾರಸ್ಥರಿಗೆ ಜೀವನ ನಿರ್ವಹಣೆಗೆ ಸಹಾಯಕವಾಗಿದೆ ಎಂದರು.ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಜಿ.ಬಿ.ರಂಗನಗೌಡ್ರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ, ಸೋಮಶೇಖರ ಸಿದ್ಲಿಂಗಪ್ಪನವರ, ಜಹೂರ ಹಾಜಿ, ಪ್ರದೀಪ ಪಟ್ಟಣ, ಗ್ಯಾರಂಟಿ ಯೋಜನೆಗಳ ಸದಸ್ಯರು ಮತ್ತು ರಾಮದುರ್ಗ ಸಾರಿಗೆ ಘಟಕದ ವ್ಯವಸ್ಥಾಪಕ, ಸಿಬ್ಬಂದಿ ಇದ್ದರು.