ಸಾರಾಂಶ
ಮಂಗಳೂರು ಶಕ್ತಿನಗರ ಶಕ್ತಿ ವಸತಿ ಶಾಲೆ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡಾಕೂಟ ಸರ್ಕಾರಿ ಪದವಿ ಪೂರ್ವ ಕಾಲೇಜು ನಾಲ್ಯಪದವು, ಶಕ್ತಿನಗರ ಇಲ್ಲಿಯ ಮೈದಾನದಲ್ಲಿ ನಡೆಯಿತು.
ಮಂಗಳೂರು: ಶಕ್ತಿ ವಸತಿ ಶಾಲೆ ಶಕ್ತಿ ನಗರ ಮಂಗಳೂರು ಇಲ್ಲಿಯ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡಾಕೂಟ ಸರ್ಕಾರಿ ಪದವಿ ಪೂರ್ವ ಕಾಲೇಜು ನಾಲ್ಯಪದವು, ಶಕ್ತಿನಗರ ಇಲ್ಲಿಯ ಮೈದಾನದಲ್ಲಿ ನಡೆಯಿತು.
ಸರ್ಕಾರಿ ಪದವಿ ಪೂರ್ವ ಕಾಲೇಜು ನಾಲ್ಯಪದವು ಇಲ್ಲಿನ ಅರ್ಥಶಾಸ್ತ್ರದ ಹಿರಿಯ ಉಪನ್ಯಾಸಕಿ ಸರಳಾ ದೇವಿ ಅವರು ಶಾಲಾ ಧ್ವಜಾರೋಹಣ ನೆರವೇರಿಸಿ, ಪಾರಿವಾಳವನ್ನು ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಪುಟ್ಟ ಪುಟ್ಟ ಮಕ್ಕಳ ಉತ್ಸಾಹವನ್ನು ಹುರಿದುಂಬಿಸಿ ಎಲ್ಲ ಪುಟಾಣಿಗಳಿಗೂ ಶುಭ ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಕ್ತಿ ವಿದ್ಯಾ ಸಂಸ್ಥೆಯ ಮುಖ್ಯ ಸಲಹೆಗಾರ ರಮೇಶ್ ಕೆ. ಮಾತನಾಡಿ, ನಮ್ಮ ಶಕ್ತಿ ಶಾಲೆಯಲ್ಲಿ ಕ್ರೀಡೆಗೆ ನಿರಂತರ ಪ್ರೋತ್ಸಾಹ ದೊರೆಯುತ್ತಿದೆ. ಭವಿಷ್ಯದಲ್ಲಿ ನಮ್ಮ ಶಕ್ತಿ ಶಾಲೆಯ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಿದರು.ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ್ ಮೂರ್ತಿ ಎಚ್, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್ ಇದ್ದರು. ಈ ಕ್ರೀಡಾಕೂಟದಲ್ಲಿ ವಿವಿಧ ಸ್ಫರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕಗಳನ್ನು ವಿತರಿಸಲಾಯಿತು.
ವಿದ್ಯಾರ್ಥಿಗಳ ಶಿಸ್ತುಬದ್ಧ ಪಥಸಂಚಲನ ಹಾಗೂ ಡ್ರಿಲ್ ಏರ್ಪಡಿಸಲಾಯಿತು. ಶಿಕ್ಷಕಿ ಸೀಮಾ ಸ್ವಾಗತಿಸಿದರು. ಪೂಜಾ ನಿರೂಪಿಸಿದರು.;Resize=(128,128))
;Resize=(128,128))
;Resize=(128,128))
;Resize=(128,128))