ಸಾರಾಂಶ
ಪಟ್ಟಣದ ಶಾಲಿನಿ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ಹಿನ್ನೆಲೆಯಲ್ಲಿ ಪುರಸಭೆ ಅಧ್ಯಕ್ಷ ಎ.ಆರ್.ಅಶೋಕ್ ಅಭಿನಂಧನೆ ಸಲ್ಲಿಸಿದರು.
ಬೇಲೂರು: ಪಟ್ಟಣದ ಶಾಲಿನಿ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ಹಿನ್ನೆಲೆಯಲ್ಲಿ ಪುರಸಭೆ ಅಧ್ಯಕ್ಷ ಎ.ಆರ್.ಅಶೋಕ್ ಅಭಿನಂಧನೆ ಸಲ್ಲಿಸಿದರು.
ಶಾಲಿನಿ ಹಾಸನದ ಬ್ರಿಗೇಡ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಓದಿನ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು, ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದ ಬಹುಮಾನ, ಪ್ರಶಸ್ತಿ ಪಡೆದಿದ್ದಾಳೆ. ಹಾಸನದಲ್ಲಿ ಕಳೆದ ತಿಂಗಳು ನಡೆದ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಶಾಲಿನಿ ಬುಧವಾರ ಪಂಜಾಬಿನ ಲೂಧಿಯಾನದಲ್ಲಿ ನಡೆಯುವ ರಾಷ್ಟ್ರಮಟ್ಟದ ಹ್ಯಾಂಡ್ ಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದು ತಾಲೂಕಿಗೆ ಕೀರ್ತಿ ತಂದಿದ್ದಾರೆ.ಪುರಸಭೆ ಅಧ್ಯಕ್ಷ ಎ.ಆರ್.ಅಶೋಕ್ ಮಾತನಾಡಿ, ಚಿಕ್ಕವಯಸ್ಸಿನಲ್ಲಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ದೈಹಿಕ, ಮಾನಸಿಕ ಬೆಳೆವಣಿಗೆ ಹೆಚ್ಚುತ್ತದೆ. ಆದರೆ ಇತ್ತೀಚಿನ ದಿನದಲ್ಲಿ ಕೆಲವು ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಕೊರತೆ ಹಾಗೂ ಆಟದ ಮೈದಾನ ಇಲ್ಲ. ಶಿಕ್ಷಣ ಇಲಾಖೆ ಈ ಬಗ್ಗೆ ಗಮನಹರಿಸಬೇಕು ಎಂದರು.ಪುರಸಭೆ ಸದಸ್ಯ ಪ್ರಭಾಕರ್, ಮಾನವ ಹಕ್ಕುಗಳ ಹೋರಾಗಾರರ ಒಕ್ಕೂಟದ ಜಿಲ್ಲಾಧ್ಯಕ್ಷ ಎಂ.ಜೆ.ನಿಂಗರಾಜ್, ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷೆ ವೈ.ಆರ್.ಭಾರತೀಗೌಡ, , ಉಪಾಧ್ಯಕ್ಷ ಲಕ್ಷ್ಮೀನಾರಾಯಣ, ಗೌರವಾಧ್ಯಕ್ಷ ಮಹಮ್ಮದ್ ಖಾಸ್ಮಿಂ, ಕಾರ್ಯದರ್ಶಿ ಶಂಕರ್ ಪ್ರಸಾದ್, ನಗರಾಧ್ಯಕ್ಷ ಹರೀಶ್, ನಗರ ಕಾರ್ಯದರ್ಶಿ ಮಂಜುನಾಥ್, ಸಂಘಟನಾ ಕಾರ್ಯದರ್ಶಿ ದೀಕ್ಷೀತ್, ಪರಮೇಶ್ ಇದ್ದರು.