ದಾವಣಗೆರೆ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ ಸುದೀರ್ಘ ಅವಧಿಗೆ ಕಾಂಗ್ರೆಸ್ ಪಕ್ಷದ ಖಜಾಂಚಿಯಾಗಿ ಕಾರ್ಯ ನಿರ್ವಹಿಸಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಗಟ್ಟಿಯಾಗಿ ನಿಲ್ಲುವಂತೆ ಮಾಡಿದ ಕೀರ್ತಿ ದಿವಂಗತ ಶಾಮನೂರು ಶಿವಶಂಕರಪ್ಪನವರಿಗೆ ಸಲ್ಲುತ್ತದೆ ಎಂದು ಚನ್ನಗಿರಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸಿ.ಎಚ್.ಶ್ರೀನಿವಾಸ್ ಹೇಳಿದರು.
ಚನ್ನಗಿರಿ: ದಾವಣಗೆರೆ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ ಸುದೀರ್ಘ ಅವಧಿಗೆ ಕಾಂಗ್ರೆಸ್ ಪಕ್ಷದ ಖಜಾಂಚಿಯಾಗಿ ಕಾರ್ಯ ನಿರ್ವಹಿಸಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಗಟ್ಟಿಯಾಗಿ ನಿಲ್ಲುವಂತೆ ಮಾಡಿದ ಕೀರ್ತಿ ದಿವಂಗತ ಶಾಮನೂರು ಶಿವಶಂಕರಪ್ಪನವರಿಗೆ ಸಲ್ಲುತ್ತದೆ ಎಂದು ಚನ್ನಗಿರಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸಿ.ಎಚ್.ಶ್ರೀನಿವಾಸ್ ಹೇಳಿದರು.
ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸೋಮವಾರ ತಾಲೂಕು ಕಾಂಗ್ರೆಸ್ ಪಕ್ಷದ ವತಿಯಿಂದ ದಾವಣಗೆರೆಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ, ಅಖಿಲ ಭಾರತ ವೀರಶೈವ ಮಹಾ ಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನವರ ನಿಧನದ ಹಿನ್ನಲೆಯಲ್ಲಿ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷದ ಸಂಕಷ್ಠದ ಸಮಯದಲ್ಲಿ ಸ್ವಂತ ಹಣವನ್ನು ಹಾಕಿ ಪಕ್ಷ ಸಂಘಟಿಸಿದ ಧಿಮಂತ ನಾಯಕರಾಗಿದ್ದು ಅವರ ರಾಜಕೀಯದ ದಿನಗಳಲ್ಲಿ ಎಂತಹ ಸ್ಥಾನ ಮಾನಗಳ ಅಸೆ, ಆಮಿಷಗಳು ಬಂದರೂ ಕಾಂಗ್ರೆಸ್ ಪಕ್ಷವನ್ನು ಬಿಡದೆ ರಾಜ್ಯದಲ್ಲಿ ಪಕ್ಷವನ್ನು ಗಟ್ಟಿಯಾಗಿ ನಿಲ್ಲುವಂತೆ ಮಾಡಿದವರು ಎಂದರು.ಸಭೆ ಪ್ರಾರಂಭಕ್ಕೂ ಮುನ್ನ ಅಗಲಿದ ಶಾಮನೂರು ಶಿವಶಂಕರಪ್ಪ ಭಾವಚಿತ್ರಕ್ಕೆ ಪುಪ್ಪ ನಮನ ಸಲ್ಲಿಸಿ ಒಂದು ನಿಮಿಷ ಮೌನಾಚರಂಣೆ ನಡೆಸಲಾಯಿತು.
ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಪಾಂಡೋಮಟ್ಟಿ ಲೋಕಣ್ಣ, ಕಾಂಗ್ರೆಸ್ ಮುಖಂಡರಾದ ತಾಪಂ ಮಾಜಿ ಸದಸ್ಯ ಶ್ರೀಕಾಂತ್, ಪಾಂಡೋಮಟ್ಟಿ ಜಗದೀಶ್, ಗುರುವಾಭೋವಿ, ಪಿ.ಆರ್.ಮಂಜುನಾಥ್, ನಲ್ಲೂರು ಶೇಖರಪ್ಪ, ತಿಪ್ಪಣ್ಣ, ಜ್ಯೋತಿ ಕೊಟ್ರೇಶ್ ಕೋರಿ, ಪುರಸಭೆಯ ಮಾಜಿ ಸದಸ್ಯ ಜಿ.ನಿಂಗಪ್ಪ, ಗೌಸ್ ಪೀರ್, ಹಾಲೇಶ್, ರುದ್ರಯ್ಯ, ಜಗದೀಶ್, ಅಮೀರ್ ಅಹಮದ್, ದೋಣಿಹಳ್ಳಿ ಸುನೀಲ್ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು.