ತರೀಕೆರೆಶಾಮನೂರು ಶಿವಶಂಕರಪ್ಪ ಅವರು ಬಸವಾದಿ ಶರಣರ ಅನುಯಾಯಿಗಳಾಗಿದ್ದರು ಎಂದು ಕನ್ನಡ ಶ್ರೀ ಬಿ.ಎಸ್.ಭಗವಾನ್ ತಿಳಿಸಿದರು.

- ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆಯಿಂದ ಶ್ರದ್ಧಾಂಜಲಿ

ಕನ್ನಡಪ್ರಭ ವಾರ್ತೆ, ತರೀಕೆರೆ

ಶಾಮನೂರು ಶಿವಶಂಕರಪ್ಪ ಅವರು ಬಸವಾದಿ ಶರಣರ ಅನುಯಾಯಿಗಳಾಗಿದ್ದರು ಎಂದು ಕನ್ನಡ ಶ್ರೀ ಬಿ.ಎಸ್.ಭಗವಾನ್ ತಿಳಿಸಿದರು.

ಸೋಮವಾರ ಪಟ್ಟಣದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ ಮಹಿಳಾ ವೇದಿಕೆಯಿಂದ ಏರ್ಪಡಿಸಿದ್ದ ಶಾಮನೂರು ಶಿವಶಂಕರಪ್ಪ ಅವರ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಶ್ಯಾಮನೂರು ಶಿವಶಂಕರಪ್ಪ ಅವರು ಶಿಕ್ಷಣ ಸಂಸ್ಥೆಗಳ ಮೂಲಕ ಜ್ಞಾನ ದಾಸೋಹ ನಡೆಸಿದ ಶರಣರಾಗಿದ್ದರು. ಅವರು ರಾಜಕಾರಣಿ ಯಾಗಿ ದಾವಣಗೆರೆ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಅವರ ನಿಧನದಿಂದ ರಾಜ್ಯಕ್ಕೆ ನಷ್ಟವಾಗಿದೆ ಎಂದರು.

ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಟಿ.ದಾದಾಪೀರ್ ಮಾತನಾಡಿ, ಕನ್ನಡ ನಾಡಿಗೆ ಶಾಮನೂರು ಶಿವಶಂಕರಪ್ಪ ನೀಡಿದ ಕೊಡುಗೆಯನ್ನು ಜನತೆ ನೆನಪಿಸಿಕೊಳ್ಳಬೇಕಾಗಿದೆ. ಶಿಕ್ಷಣ, ರಾಜಕೀಯ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಬಾಪೂಜಿ ವಿದ್ಯಾ ಸಂಸ್ಥೆಯ ಮೂಲಕ ನೀಡಿದ ಕೊಡುಗೆ ಸ್ಮರಣೀಯವಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಹುದ್ದೆಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ಶರಣ ತತ್ವ ಅನುಯಾಯಿಗಳಾಗಿದ್ದ ಶಿವಶಂಕರಪ್ಪ ನಿಧನದಿಂದ ನಾಡಿಗೆ ನಷ್ಟ ಉಂಟಾಗಿದೆ ಎಂದರು.

ಗಡಿ ಹಳ್ಳಿ ಸರ್ಕಾರಿ ಪ್ರೌಢ ಶಾಲೆ ಶಿಕ್ಷಕ ಜಿ.ಎಸ್.ಸತೀಶ್ ಮಾತನಾಡಿ, ನಿರುದ್ಯೋಗದಿಂದ ಬಳಲುತ್ತಿದ್ದ ದಾವಣಗೆರೆ ಜಿಲ್ಲೆಯ ಕೈಗಾರಿಕೆ, ಆಸ್ಪತ್ರೆಗಳನ್ನು ಶಾಮನೂರು ಶಿವಶಂಕರಪ್ಪ ಪ್ರಾರಂಭಿಸುವ ಮೂಲಕ ಯುವಕರಿಗೆ ಉದ್ಯೋಗ ಒದಗಿಸಿದರು. ಶರಣರ ದಾಸೋಹ ತತ್ವವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದರು ಎಂದರು.

ಶ್ರದ್ಧಾಂಜಲಿ ಸಭೆಯಲ್ಲಿ ಮುಖಂಡರಾದ ಮನಸುಳಿ ಮೋಹನ್, ಶಿವಣ್ಣ, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಇದ್ದರು.