ರಾಯಣ್ಣಗೆ ಅವಮಾನ: ಗ್ರಾಮದ ಆರೋಪಿಯ ಬಂಧನ

| Published : Aug 22 2024, 12:46 AM IST

ಸಾರಾಂಶ

ತಾಳಿಕೋಟೆ: ತಾಲೂಕಿನ ಹಗರಗುಂಡ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನಿಸಿದ ಘಟನೆಗೆ ಸಂಬಂಧಿಸಿದಂತೆ ತಾಳಿಕೋಟಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಅದೇ ಗ್ರಾಮದ ಯಲ್ಲಾಲಿಂಗ ಸಿದ್ದಪ್ಪ ಚಿಗರಿ ಬಂಧಿತ ಯುವಕ. ಖಚಿತ ಮಾಹಿತಿ ಹಿನ್ನಲೆಯಲ್ಲಿ ಈತನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದು ವಿಚಾರಿಸಿದಾಗ ತಾನೇ ಮಾಡಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ.

ತಾಳಿಕೋಟೆ: ತಾಲೂಕಿನ ಹಗರಗುಂಡ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನಿಸಿದ ಘಟನೆಗೆ ಸಂಬಂಧಿಸಿದಂತೆ ತಾಳಿಕೋಟಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಅದೇ ಗ್ರಾಮದ ಯಲ್ಲಾಲಿಂಗ ಸಿದ್ದಪ್ಪ ಚಿಗರಿ ಬಂಧಿತ ಯುವಕ. ಖಚಿತ ಮಾಹಿತಿ ಹಿನ್ನಲೆಯಲ್ಲಿ ಈತನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದು ವಿಚಾರಿಸಿದಾಗ ತಾನೇ ಮಾಡಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ. ಘಟನೆಯ ಬಗ್ಗೆ ಗ್ರಾಮಸ್ಥ ಸೋಮಪ್ಪ ಸಿದ್ದಪ್ಪ ಗಾಡಿ ನೀಡಿದ್ದ ದೂರು ದಾಖಲಿಸಿಕೊಂಡು ಪೊಲೀಸರು ಶೋಧ ನಡೆಸಿದ್ದರು. ಎಸ್ಪಿ ಋಷಿಕೇಶ ಸೋನಾವನೆ ಅವರ ಮಾರ್ಗದರ್ಶನದಲ್ಲಿ ಬ.ಬಾಗೇವಾಡಿ ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ತಾಳಿಕೋಟೆ ಪಿಎಸ್‌ಐ ರಾಮನಗೌಡ ಸಂಕನಾಳ ಮತ್ತು ಅಪರಾಧ ವಿಭಾಗದ ಪಿಎಸ್ಐ ಆರ್.ಎಸ್.ಭಂಗಿ ನೇತೃತ್ವದಲ್ಲಿ ಎರಡು ತನಿಖಾ ತಂಡ ರಚಿಸಿತ್ತು. ಪೊಲೀಸ್‌ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ನಗದು ಬಹುಮಾನ ಘೋಷಿಸಿದ್ದಾರೆ.