ರಾಯಣ್ಣ ಭಾಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ

| Published : Aug 21 2024, 12:34 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ತಾಳಿಕೋಟೆ ಕಿಡಿಗೇಡಿಗಳು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ರಾಯಣ್ಣನ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿರುವ ಘಟನೆ ತಾಲೂಕಿನ ಹಗರಗುಂಡ ಗ್ರಾಮದಲ್ಲಿ ನಡೆದಿದೆ. ಆ.೧೯ರ ಮಧ್ಯರಾತ್ರಿ ಗ್ರಾಮದ ಹನುಮಂತ ದೇವರ ದೇವಸ್ಥಾನದ ಬಳಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಟ್ಟೆಯ ಮೇಲೆ ಭಾವಚಿತ್ರ ಹಾಕಲಾಗಿತ್ತು.ಈ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ, ಬ್ಯಾನರ್ ಕೆಳಗೆ ಕಪ್ಪು ಬಣ್ಣದ ಗುರುತಿನಿಂದ ಜೈ ಟಿಪ್ಪು ಸುಲ್ತಾನ್ ಎಂದು ಬರೆದಿದ್ದಾರೆ.

ಕನ್ನಡಪ್ರಭ ವಾರ್ತೆ ತಾಳಿಕೋಟೆ

ಕಿಡಿಗೇಡಿಗಳು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ರಾಯಣ್ಣನ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿರುವ ಘಟನೆ ತಾಲೂಕಿನ ಹಗರಗುಂಡ ಗ್ರಾಮದಲ್ಲಿ ನಡೆದಿದೆ. ಆ.೧೯ರ ಮಧ್ಯರಾತ್ರಿ ಗ್ರಾಮದ ಹನುಮಂತ ದೇವರ ದೇವಸ್ಥಾನದ ಬಳಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಟ್ಟೆಯ ಮೇಲೆ ಭಾವಚಿತ್ರ ಹಾಕಲಾಗಿತ್ತು.ಈ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ, ಬ್ಯಾನರ್ ಕೆಳಗೆ ಕಪ್ಪು ಬಣ್ಣದ ಗುರುತಿನಿಂದ ಜೈ ಟಿಪ್ಪು ಸುಲ್ತಾನ್ ಎಂದು ಬರೆದಿದ್ದಾರೆ. ಸೋಮವಾರ ತಡರಾತ್ರಿ ವೇಳೆ ಈ ಕೃತ್ಯ ನಡೆದಿದ್ದು, ಬೆಳಗ್ಗೆ ಗ್ರಾಮದಲ್ಲೆಲ್ಲ ಸುದ್ದಿ ಹರಡುತ್ತಿದ್ದಂತೆ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ನಂತರ ವಿಷಯ ತಿಳಿದು ಸ್ಥಳಕ್ಕೆ ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ರಾಮನಗೌಡ ಸಂಕನಾಳ, ಅಪರಾಧ ವಿಭಾಗದ ಪಿಎಸ್‌ಐ ಆರ್.ಎಸ್.ಭಂಗಿ ಅವರು ಭೇಟಿ ನೀಡಿ ಗ್ರಾಮಸ್ಥರನ್ನು ಸಮಾಧಾನ ಮಾಡಿ ಪರಿಸ್ಥಿತಿ ಅವಲೋಕಿಸಿದರು. ಈ ಘಟನೆಗೆ ಸಂಬಂಧಿಸಿ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಹಗರಗುಂಡ ಗ್ರಾಮದ ಸೋಮಪ್ಪ ಸಿದ್ದಪ್ಪ ಗಾಡಿ ಎಂಬುವರು ದೂರು ನೀಡಿದ್ದು, ಭಾರತೀಯ ನ್ಯಾಯ ಸಂಹಿತೆ ಕಲಂ ೨೯೮ ೨೦೨೩ರ ಪ್ರಕಾರ ಪ್ರಕರಣ ದಾಖಲಾಗಿದೆ.