ಶನಿವಾರಸಂತೆ ಸರ್ಕಾರಿ ಶಾಲೆ ಶತಮಾನೋತ್ಸವ: ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ

| Published : Jun 08 2024, 12:31 AM IST

ಶನಿವಾರಸಂತೆ ಸರ್ಕಾರಿ ಶಾಲೆ ಶತಮಾನೋತ್ಸವ: ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ
Share this Article
  • FB
  • TW
  • Linkdin
  • Email

ಸಾರಾಂಶ

ಶನಿವಾರಸಂತೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಪ್ರಾರಂಭವಾಗಿ ನೂರು ವರ್ಷ ದಾಟಿರುವ ಹಿನ್ನೆಲೆಯಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಸರ್ಕಾರಿ ಪ್ರಾಥಮಿಕ ಶಾಲೆ ಮತ್ತು ಪಕ್ಕದಲ್ಲಿರುವ ಭಾರತಿ ವಿದ್ಯಾಸಂಸ್ಥೆಯ ಹಳೆಯ ನಿವೃತ್ತ ಶಿಕ್ಷಕರಿಗೆ ಗುರುವಂದನೆ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ತೀರ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ಶನಿವಾರಸಂತೆ

ಶನಿವಾರಸಂತೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಪ್ರಾರಂಭವಾಗಿ ನೂರು ವರ್ಷ ದಾಟಿರುವ ಹಿನ್ನೆಲೆಯಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಸರ್ಕಾರಿ ಪ್ರಾಥಮಿಕ ಶಾಲೆ ಮತ್ತು ಪಕ್ಕದಲ್ಲಿರುವ ಭಾರತಿ ವಿದ್ಯಾಸಂಸ್ಥೆಯ ಹಳೆಯ ನಿವೃತ್ತ ಶಿಕ್ಷಕರಿಗೆ ಗುರುವಂದನೆ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ತೀರ್ಮಾನಿಸಲಾಯಿತು. ಪಟ್ಟಣದ ಚಿನ್ನಳ್ಳಿ ರಸ್ತೆಯಲ್ಲಿರುವ ಏರಿ ರೆಸಾರ್ಟ್‍ನಲ್ಲಿ ಶನಿವಾರಸಂತೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮತ್ತು ಭಾರತಿ ವಿದ್ಯಾಸಂಸ್ಥೆಯಲ್ಲಿ 1983 ರಿಂದ 1995 ರವರೆಗೆ 1 ರಿಂದ 12ನೇ ತರಗತಿ ಮುಗಿಸಿದ್ದ ಹಳೆಯ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಸ್ನೇಹ ಸಮ್ಮೀಲನ ಕಾರ್ಯಕ್ರಮದಲ್ಲಿ ಹಳೆಯ ಶಿಕ್ಷಕರಿಗೆ ಗುರುವಂದನೆ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ತೀರ್ಮಾನಿಸಲಾಯಿತು.

ಸಭೆಯಲ್ಲಿ ಹಳೆಯ ವಿದ್ಯಾರ್ಥಿಗಳು ಶನಿವಾರಸಂತೆ ಸರ್ಕಾರಿ ಪ್ರಾಥಮಿಕ ಶಾಲೆ ನೂರು ವರ್ಷಗಳನ್ನು ದಾಟಿದೆ. ಇಲ್ಲಿ ಕಲಿತ ಸಾವಿರಾರು ವಿದ್ಯಾರ್ಥಿಗಳು ವಿದ್ಯಾವಂತರಾಗಿ ತಮ್ಮ ಬದುಕು ರೂಪಿಸಿಕೊಂಡಿದ್ದಾರೆ ಅದೆ ರೀತಿ ಪಕ್ಕದ ಭಾರತಿ ವಿದ್ಯಾಸಂಸ್ಥೆಯಲ್ಲಿ ಪ್ರೌಢಶಾಲೆಯಿಂದ 12ನೇ ತರಗತಿ ವರೆಗೂ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಬ್ಯಾಸ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಉಭಯ ಶಾಲೆಗಳಲ್ಲಿ ವಿದ್ಯಾಬ್ಯಾಸ ಮಾಡಿರುವ ಹಳೆಯ ವಿದ್ಯಾರ್ಥಿಗಳು, ಗ್ರಾಮ ಪಂಚಾಯಿತಿ, ವಿವಿಧ ಸಂಘ-ಸಂಸ್ಥೆಯವರೆಲ್ಲಾರೂ ಜೊತೆಗೂಡಿ ಉಭಯ ಶಾಲೆಯ ಹಳೆಯ ಶಿಕ್ಷಕರನ್ನು ಗುರುತಿಸಿ ಅವರನ್ನು ಸನ್ಮಾನಿಸುವ ಮೂಲಕ ಗುರುವಂದನೆ ಕಾರ್ಯಕ್ರಮವನ್ನು ಆಯೋಜನೆ ಮಾಡುವಂತೆ ನಿರ್ಣಯ ಕೈಗೊಳ್ಳಲಾಯಿತು.

ಈ ಬಗ್ಗೆ ಮತ್ತೊಂದು ಸಭೆಯಲ್ಲಿ ಗುರುವಂದನೆ ಕಾರ್ಯಕ್ರಮ ಯಾವಾಗ ನಡೆಸುವುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಬಗ್ಗೆಯೂ ಸಭೆಯಲ್ಲಿ ತೀರ್ಮಾನಿಸಲಾಯಿತು. ಸ್ನೇಹ ಸಮ್ಮೀಲನ ಸಭೆಯಲ್ಲಿ ಹಳೆಯ ವಿದ್ಯಾರ್ಥಿಯಾದ ಮತ್ತು ಹಾಸನ ಜಿಲ್ಲಾ ವಾರ್ತಾಧಿಕಾರಿ ವಿನೋದ್‌ಚಂದ್ರ ಹಾಗೂ ಹಳೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.