ಸಾರಾಂಶ
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಕಸಬಾ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶಂಕರ್ ಹಾಗೂ ಉಪಾಧ್ಯಕ್ಷರಾಗಿ ಪುಟ್ಟರಾಮು ಅವಿರೋಧವಾಗಿ ಆಯ್ಕೆಯಾದರು.ಸಂಘದಲ್ಲಿ ಒಟ್ಟು 12 ಮಂದಿ ನಿರ್ದೇಶಕರಲ್ಲಿ ಕಾಂಗ್ರೆಸ್ ಬೆಂಬಲಿತ 8 ಹಾಗೂ ಜೆಡಿಎಸ್-ಬಿಜೆಪಿ ಮೈತ್ರಿಗೆ 4 ಮಂದಿ ನಿರ್ದೇಶಕರು ಇದ್ದರು. ಒಡಂಬಡಿಕೆ ಮೂಲಕ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಶಂಕರ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪುಟ್ಟರಾಮು ಅವರಿಂದ ಅರ್ಜಿ ಸಲ್ಲಿಸಲಾಗಿತ್ತು. ಚುನಾವಣಾಧಿಕಾರಿ ಸಿಡಿಒ ಪಾರ್ವತಮ್ಮ ಅವಿರೋಧ ಎಂದು ಘೋಷಣೆ ಮಾಡಿದರು. ಸಂಘದ ಇಒ ಪವನ್ ಸಹಾಯಕರಾಗಿ ಕೆಲಸ ನಿರ್ವಹಿಸಿದರು.
ಈ ವೇಳೆ ಸಂಘದ ನಿರ್ದೇಶಕರು, ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮುಖಂಡರು ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದರು. ಪುರಸಭೆ ಪ್ರಭಾರ ಅಧ್ಯಕ್ಷ ಎಂ.ಎಲ್. ದಿನೇಶ್, ಸದಸ್ಯರಾದ ದಯಾನಂದ, ಎಸ್.ಪ್ರಕಾಶ್, ಗಂಜಾಂಶಿವು, ರಾಜು ನಿರ್ದೇಶಕರಾದ ಸೋಮಸುಂದರ್, ಪರಮೇಶ್, ವೆಂಕಟರಾಮು ಸೇರಿದಂತೆ ಇತರೆ ಮುಖಂಡರು ಇದ್ದರು.ಮತ್ತೀಕೆರೆ ಜಯರಾಮ್ ಅವರಿಗೆ ಕೆ.ಕೆ.ಶೆಟ್ಟಿ ಕುತ್ತಿಕಾರ್ ದತ್ತಿನಿಧಿ ಪ್ರಶಸ್ತಿ
ಮಂಡ್ಯ:ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೊಡಮಾಡುವ ವಿವಿಧ ದತ್ತಿನಿಧಿ ಪ್ರಶಸ್ತಿಗಳಲ್ಲಿ ಕೆ.ಕೆ.ಶೆಟ್ಟಿ ಕುತ್ತಿಕಾರ್ ದತ್ತಿನಿಧಿ ಪ್ರಶಸ್ತಿ ಹಿರಿಯ ಪತ್ರಕರ್ತ ಮತ್ತೀಕೆರೆ ಜಯರಾಮ್ ಅವರಿಗೆ ಲಭಿಸಿದೆ.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಸುದೀರ್ಘ ಮೂರು ದಶಕ ಸೇವೆ ಸಲ್ಲಿಸಿರುವ ಮತ್ತೀಕೆರೆ ಜಯರಾಮ್ ಅವರನ್ನು ದತ್ತಿನಿಧಿ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ವಿಜಯ ಕರ್ನಾಟಕ, ಕನ್ನಡಪ್ರಭ, ವಿಶ್ವವಾಣಿ ಪತ್ರಿಕೆಗಳಲ್ಲಿ ಎರಡೂವರೆ ದಶಕಕ್ಕೂ ಹೆಚ್ಚು ಕಾಲ ಪ್ರಧಾನ ವರದಿಗಾರರಾಗಿ ಸೇವೆ ಸಲ್ಲಿಸಿರುವ ಜಯರಾಂ, ಪ್ರಸ್ತುತ ಆರಂಭ ದಿನಪತ್ರಿಕೆ ಪ್ರಧಾನ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕೆಯುಡಬ್ಲ್ಯುಜೆ ರಾಜ್ಯ ಸಂಘದಲ್ಲಿ ಎರಡು ಬಾರಿ ಕಾರ್ಯಕಾರಿ ಸದಸ್ಯ, ಎರಡು ಬಾರಿ ಉಪಾಧ್ಯಕ್ಷರಾಗಿ, ಪ್ರಸ್ತುತ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಜಯರಾಮ್ ಈ ಹಿಂದೆ ಮಂಡ್ಯ ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ, ಎರಡು ಬಾರಿ ಅಧ್ಯಕ್ಷರಾಗಿ ಸಂಘದ ಅಭ್ಯುದಯಕ್ಕೆ ಶ್ರಮಿಸಿದ್ದಾರೆ.ದತ್ತಿನಿಧಿ ಪ್ರಶಸ್ತಿಯು ನಗದು, ಪ್ರಶಸ್ತಿ ಪತ್ರ ಸ್ಮರಣಿಕೆ ಹೊಂದಿದ್ದು, 2025ರ ಮೇ 3ರಂದು ಕೇರಳದ ಕಾಸರಗೋಡು ಜಿಲ್ಲೆಯ ಸೀತಾಂಗೋಳಿ ಎಲೈ ಸಭಾಂಗಣದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಕೆ.ಕೆ.ಶೆಟ್ಟಿ ಕುತ್ತಿಕಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಗಣ್ಯರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.