ಕುಂದಾಪುರ: ಇಲ್ಲಿನ ಶಂಕನಾರಾಯಣದ ಮದರ್ ತೆರೇಸಾ ಪದವಿ ಪೂರ್ವ ಕಾಲೇಜು ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಶೇ. 100 ಫಲಿತಾಂಶದೊಂದಿಗೆ ರಾಜ್ಯ ಮಟ್ಟದಲ್ಲಿ ವಿವಿಧ ರ್‍ಯಾಂಕ್ ಗಳನ್ನು ಗಳಿಸಿದೆ.

ಕುಂದಾಪುರ: ಇಲ್ಲಿನ ಶಂಕನಾರಾಯಣದ ಮದರ್ ತೆರೇಸಾ ಪದವಿ ಪೂರ್ವ ಕಾಲೇಜು ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಶೇ. 100 ಫಲಿತಾಂಶದೊಂದಿಗೆ ರಾಜ್ಯ ಮಟ್ಟದಲ್ಲಿ ವಿವಿಧ ರ್‍ಯಾಂಕ್ ಗಳನ್ನು ಗಳಿಸಿದೆ. ಈ ಕಾಲೇಜು ಈ ಬಾರಿ ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಿದೆ. ಒಟ್ಟು 175 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 92 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 83 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವುದು ಕಾಲೇಜಿನ ಗುಣಮಟ್ಟದ ಶಿಕ್ಷಣಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ.ವಿಜ್ಞಾನ ವಿಭಾಗದಲ್ಲಿ ಸಂಜನಾ 595 ಅಂಕಗಳನ್ನು ಪಡೆದು ಶೇ. 99.16 ಫಲಿತಾಂಶದೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ತಂದುಕೊಟ್ಟಿದ್ದಾರೆ. ಪ್ರತೀಕ್ಷಾ ಮತ್ತು ಸಿಂಚನಾ 586, ಸಂಚಿತಾ ಶೆಟ್ಟಿ ಮತ್ತು ಸುಷ್ಮಾ 581 ಅಂಕ ಗಳಿಸಿದ್ದಾರೆ.ವಾಣಿಜ್ಯ ವಿಭಾಗದಲ್ಲಿ ಅಮೂಲ್ಯ 595 ಅಂಕಗಳನ್ನು ಗಳಿಸಿ ಶೇ. 99.16 ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದು ತನ್ನ ಪ್ರತಿಭೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾಳೆ. ರಿಶಿತಾ ಮತ್ತು ಪ್ರಗತಿ 591, ಅಮೂಲ್ಯ ಮತ್ತು ಕ್ಷಮಾ 590 ಅಂಕ ಗಳಿಸಿದ್ದಾರೆ. ಇವರೆಲ್ಲರ ಸಾಧನೆ ಕಾಲೇಜಿನ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ದಿದೆ.

ವಿದ್ಯಾರ್ಥಿಗಳ ಈ ಉಜ್ವಲ ಸಾಧನೆಗೆ ಉಪನ್ಯಾಸಕರ ಪರಿಶ್ರಮ, ಸಮರ್ಪಿತ ಬೋಧನೆ ಹಾಗೂ ಸಮಗ್ರ ಮಾರ್ಗದರ್ಶನವೇ ಪ್ರಮುಖ ಕಾರಣವಾಗಿದ್ದು, ಸಂಸ್ಥೆಯ ಶೈಕ್ಷಣಿಕ ಶ್ರೇಷ್ಠತೆಯನ್ನು ಪ್ರತಿಬಿಂಬಿಸುತ್ತದೆ. ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಹರ್ಷ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.