ಉಡುಪಿ: ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ಶ್ರೀ ಸಾಯಿ ಸಾಂತ್ವಾನ ಮಂದಿರ ಟ್ರಸ್ಟ್ ನ ಆಶ್ರಯದಲ್ಲಿ ಪ್ರತಿಷ್ಠಾಪಿಸಲಾಗುತ್ತಿರುವ ಶ್ರೀ ಮುಖ್ಯಪ್ರಾಣ ದೇವರ 19 ಅಡಿ ಎತ್ತರದ ಶಿಲಾಮೂರ್ತಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮಾ. 31ರಿಂದ ಎ. 3ರವರೆಗೆ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಶ್ರೀ ಸಾಯಿ ಈಶ್ವರ್ ಗುರೂಜಿ ತಿಳಿಸಿದರು.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಶಿಲಾಮೂರ್ತಿಯನ್ನು ಶನಿವಾರ ಉಡುಪಿ ಜೋಡುಕಟ್ಟೆಯಿಂದ ಭವ್ಯ ಮೆರವಣಿಗೆಯಲ್ಲಿ ಶ್ರೀ ಕ್ಷೇತ್ರಕ್ಕೆ ತರಲಾಗುವುದು. 26ರಂದು ರಾಮನವಮಿಯಂದು ಹನುಮ ಜನ್ಮ ಭೂಮಿಯಿಂದ ಹನುಮ ಜ್ಯೋತಿ ಮತ್ತು ಹನುಮ ಧ್ವಜವು ಹೊರಟು, 29ಕ್ಕೆ ಉಡುಪಿಗೆ ತಲುಪಲಿದೆ. ಅವುಗಳನ್ನು ಮತ್ತು ಅವಧೂತ ಭಗವಾನ್ ನಿತ್ಯಾನಂದ ಸ್ವಾಮಿಯ 200 ಕೆಜಿ ತೂಕದ ಪಂಚಲೋಹ ಮೂರ್ತಿಯನ್ನು ಉಡುಪಿ ಜೋಡುಕಟ್ಟೆಯಿಂದ ಭವ್ಯ ಮೆರವಣಿಗೆಯಲ್ಲಿ ಶ್ರೀ ಕ್ಷೇತ್ರಕ್ಕೆ ತರಲಾಗುತ್ತದೆ ಎಂದವರು ಹೇಳಿದರು.
ಮಾ. 31ರಿಂದ ಏ. 3ರವರೆಗೆ ವೈದಿಕರಿಂದ ಸಕಲ ಧಾರ್ಮಿಕ ಸಂಪ್ರದಾಯದಂತೆ ವೈಭವದಿಂದ ಬ್ರಹ್ಮಕಲಶಾಭಿಷೇಕ ಇತ್ಯಾದಿ ವಿಧಿಗಳನ್ನು ನಡೆಲಾಗುತ್ತದೆ. ನಿತ್ಯ ಸಾವಿರಾರು ಮಂದಿ ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದರು.ಸುದ್ದಿಗೋಷ್ಠಿಯಲ್ಲಿ ಕ್ಷೇತ್ರದ ಪ್ರಮುಖರಾದ ಗೀತಾಂಜಲಿ ಎಂ. ಸುವರ್ಣ, ಅಭಿರಾಜ್ ಎಂ. ಸುವರ್ಣ, ಸುನಿಲ್ ಕೆ.ಆರ್, ವಿಜಯ ಕೊಡವೂರು, ವೀಣಾ ಎಸ್. ಶೆಟ್ಟಿ ಮುಂತಾದವರಿದ್ದರು.ಶಂಕರಪುರ ಕ್ಷೇತ್ರ: 31ರಿಂದ ಮುಖ್ಯಪ್ರಾಣ ಶಿಲಾಮೂರ್ತಿ ಬ್ರಹ್ಮಕಲಶೋತ್ಸವ
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ಶ್ರೀ ಸಾಯಿ ಸಾಂತ್ವಾನ ಮಂದಿರ ಟ್ರಸ್ಟ್ ನ ಆಶ್ರಯದಲ್ಲಿ ಪ್ರತಿಷ್ಠಾಪಿಸಲಾಗುತ್ತಿರುವ ಶ್ರೀ ಮುಖ್ಯಪ್ರಾಣ ದೇವರ 19 ಅಡಿ ಎತ್ತರದ ಶಿಲಾಮೂರ್ತಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮಾ. 31ರಿಂದ ಎ. 3ರವರೆಗೆ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಶ್ರೀ ಸಾಯಿ ಈಶ್ವರ್ ಗುರೂಜಿ ತಿಳಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.