ಸಾರಾಂಶ
ಬಾಗಲಕೋಟೆ: ಜಿಲ್ಲಾ ಬಿಜೆಪಿಗೆ ನೂತನ ಜಿಲ್ಲಾಧ್ಯಕ್ಷರ ಘೋಷಣೆಯಾಗಿದ್ದು, ಶಾಂತಗೌಡ ಪಾಟೀಲರನ್ನೇ ಭಾಜಪ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ಮುಂದುವರಿಸಲಾಗಿದೆ.ಬಿಜೆಪಿ ಜಿಲ್ಲಾಧ್ಯಕ್ಷ, ಬಾಗಲಕೋಟೆ, ಶಾಂತಗೌಡ ಪಾಟೀಲ, ಜಿಲ್ಲಾ ಘಟಕ
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾ ಬಿಜೆಪಿಗೆ ನೂತನ ಜಿಲ್ಲಾಧ್ಯಕ್ಷರ ಘೋಷಣೆಯಾಗಿದ್ದು, ಶಾಂತಗೌಡ ಪಾಟೀಲರವರನ್ನೇ ಭಾಜಪ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ಮುಂದುವರಿಸಲಾಗಿದೆ.
ಜಿಲ್ಲೆಯಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜ್ಯದ ಮುಖಂಡರು ಸ್ಥಳೀಯ ಮುಖಂಡರು, ಹಿರಿಯ ಪದಾಧಿಕಾರಿಗಳ ಜೊತೆ ಚರ್ಚಿಸಿ ಸಲಹೆ ತೆಗೆದುಕೊಂಡು ಹಾಲಿ ಜಿಲ್ಲಾಧ್ಯಕ್ಷರನ್ನೇ ಮುಂದುವರೆಸುವ ಉತ್ತಮ ನಿರ್ಣಯ ತೆಗೆದುಕೊಂಡಿದ್ದಾರೆ.
ಶಾಂತಗೌಡ ಪಾಟೀಲರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಬರಲಿರುವ ಲೋಕಸಭಾ ಚುನಾವಣೆ ಅಥವಾ ಪಕ್ಷ ಸಂಘಟನೆಯ ಕಾರ್ಯ ಶಾಂತಗೌಡರ ನೇತೃತ್ವದಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ನೀಡಲಿದೆ.
ಶಾಂತಗೌಡರ ನೇಮಕಕ್ಕೆ ಜಿಲ್ಲೆಯ ಎಲ್ಲ ಪದಾಧಿಕಾರಿಗಳು, ಪ್ರಮುಖರು, ಹಿರಿಯರು, ಕಾರ್ಯಕರ್ತರು, ಪಕ್ಷದ ಹಿತೈಷಿಗಳು, ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ಎಂದು ಜಿಲ್ಲಾ ವಕ್ತಾರ ಸತ್ಯನಾರಾಯಣ ಹೇಮಾದ್ರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.