ಸಾರಾಂಶ
ಬಾದಾಮಿ: ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲರ ಪುತ್ರಿ ಶಿವಾನಿ (ಶಿವಬಸಮ್ಮ) ವಿವಾಹ ಬೆಳಗಾವಿ ಜಿಲ್ಲೆಯ ರಾಮದುರ್ಗದ ಎಸ್.ವೈ. ಜಯಣ್ಣ ಪುತ್ರ ಸುದರ್ಶನ ಜೊತೆಗೆ ಶುಕ್ರವಾರ ನಗರದ ಎಸ್.ವಿ.ಪಿ. ಸಂಸ್ಥೆಯ ಬಸವಭವನದಲ್ಲಿ ಅದ್ದೂರಿಯಾಗಿ ಜರುಗಿತು. ಸಂಸದ ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯಸಚೇತಕ ಎನ್. ರವಿಕುಮಾರ, ತೇರದಾಳ ಶಾಸಕ ಸಿದ್ದು ಸವದಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಸೇರಿದಂತೆ ಶಾಸಕರು, ಮುಖಂಡರು ಪಾಲ್ಗೊಂಡಿದ್ದರು.
ಬಾದಾಮಿ: ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಇವರ ಪುತ್ರಿ ಶಿವಾನಿ (ಶಿವಬಸಮ್ಮ) ಇವರ ವಿವಾಹ ಬೆಳಗಾವಿ ಜಿಲ್ಲೆಯ ರಾಮದುರ್ಗದ ಎಸ್.ವೈ. ಜಯಣ್ಣ ಪುತ್ರ ಸುದರ್ಶನ ಇವರ ಜೊತೆಗೆ ಶುಕ್ರವಾರ ನಗರದ ಎಸ್.ವಿ.ಪಿ. ಸಂಸ್ಥೆಯ ಬಸವಭವನದಲ್ಲಿ ಅದ್ದೂರಿಯಾಗಿ ಜರುಗಿತು.
ವಿವಾಹ ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯಸಚೇತಕ ಎನ್. ರವಿಕುಮಾರ, ತೇರದಾಳ ಶಾಸಕ ಸಿದ್ದು ಸವದಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ, ಮಾಜಿ ಶಾಸಕರಾದ ಡಾ.ವೀರಣ್ಣ ಚರಂತಿಮಠ, ದೊಡ್ಡನಗೌಡ ಪಾಟೀಲ, ಎಸ್.ಜಿ. ನಂಜಯ್ಯನಮಠ, ಶ್ರೀಕಾಂತ ಕುಲಕರ್ಣಿ, ಮುಖಂಡ ಮಹೇಶ ಹೊಸಗೌಡ್ರ ಅವರು ಸೇರಿದಂತೆ ತಾಲೂಕಿನ ಹಾಗೂ ಜಿಲ್ಲೆಯ ವಿವಿಧೆಡೆಗಳಿಂದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿ ವಧು-ವರರಿಗೆ ಅಕ್ಷತೆ ಹಾಕಿ ಶುಭ ಹಾರೈಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಪತ್ನಿ ಲಕ್ಷ್ಮೀ ಪಾಟೀಲ ಸೇರಿದಂತೆ ಅಪಾರ ಬಂಧು ಬಳಗದವರು ಹಾಜರಿದ್ದರು. ಗುರುವಾರ ರಾತ್ರಿ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಬಿ. ಶ್ರೀರಾಮುಲು, ಮುಖಂಡರಾದ ಜಗದೀಶ ಕಾರಂತ ಇನ್ನಿತರರು ಭಾಗವಹಿಸಿ ಶುಭ ಕೋರಿದರು.