ಶಾಂತಳ್ಳಿ ಗ್ರಾಮದಲ್ಲಿರುವ ಶ್ರೀಕುಮಾರಲಿಂಗೇಶ್ವರ ದೇವಾಲಯದ ೬೭ನೇ ವರ್ಷದ ಜಾತ್ರಾ ಮಹೋತ್ಸವದ ಸಮಾರೋಪ ಸಮಾರಂಭ ದೇವಾಲಯ ಮುಂಭಾಗದ ಪ್ರಶಾಂತ ವೇದಿಕೆಯಲ್ಲಿ ನಡೆಯಿತು.
ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಶಾಂತಳ್ಳಿ ಗ್ರಾಮದಲ್ಲಿರುವ ಶ್ರೀಕುಮಾರಲಿಂಗೇಶ್ವರ ದೇವಾಲಯದ ೬೭ನೇ ವರ್ಷದ ಜಾತ್ರಾ ಮಹೋತ್ಸವದ ಸಮಾರೋಪ ಸಮಾರಂಭ ದೇವಾಲಯ ಮುಂಭಾಗದ ಪ್ರಶಾಂತ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಉದ್ಘಾಟಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ದೇವಾಲಯ ಧರ್ಮದರ್ಶಿ ಸಮಿತಿ ಅಧ್ಯಕ್ಷ ಕೆ.ಎಂ. ಲೋಕೇಶ್, ಪ್ರಮುಖರಾದ ಕೆ.ಕೆ. ಮುತ್ತಣ್ಣ, ಎಸ್.ಆರ್. ಉತ್ತಯ್ಯ, ಜಿ.ಎಸ್. ಮಧು ಕುಮಾರ್ ಸೇರಿದಂತೆ ಇತರರು ಇದ್ದರು. ಧರ್ಮದರ್ಶಿ ಕೆ.ಕೆ. ಪೊನ್ನಪ್ಪ, ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿ ಡಿ.ಪಿ. ಜೋಯಪ್ಪ, ನಿವೃತ್ತ ನೀರುಗಂಟಿ ಎಸ್.ಜೆ. ರಾಜು, ಶೈಕ್ಷಣಿಕವಾಗಿ ಸಾಧನೆಗೈದ ವಿದ್ಯಾರ್ಥಿಗಳಾದ ಬೆಟ್ಟದಳ್ಳಿ ಗ್ರಾಮದ ಕೆ.ಜಿ. ನಿಧಿ ಹಾಗೂ ಬೆಂಕಳ್ಳಿ ಗ್ರಾಮದ ಸಿ.ಎಸ್. ಆದ್ವಿ ಅವರುಗಳನ್ನು ಸನ್ಮಾನಿಸಲಾಯಿತು.ಫಲಪುಷ್ಪ, ವಸ್ತು ಪ್ರದರ್ಶನ, ವಿಶೇಷ ವಸ್ತುಗಳ ಪ್ರದರ್ಶನ ಸ್ಪರ್ಧೆಯಲ್ಲಿ ವಿಜೇತರಾದ ಕೃಷಿಕರಿಗೆ ಬಹುಮಾನ ವಿತರಿಸಲಾಯಿತು. ಶಾಂತಳ್ಳಿ ಹೋಬಳಿ ವ್ಯಾಪ್ತಿಯ ವಿವಿಧ ಶಾಲೆಗಳ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.