ಸಾರಾಂಶ
ಬೆಂಗಳೂರು: ಬಿಡದಿಯ ಮೈಕೊ ಕನ್ನಡ ಬಳಗ ಬೆಂಗಳೂರು ನಗರ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿರುವ ಸಮಾಜವಾದಿ ಧುರೀಣ ಶಾಂತವೇರಿ ಗೋಪಾಲಗೌಡ ಸ್ಮಾರಕ ಪ್ರಶಸ್ತಿಗೆ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಅರಳಾಳುಸಂದ್ರ ಗ್ರಾಮದ ರೈತ ಹೋರಾಟಗಾರ್ತಿ ಅನುಸೂಯಮ್ಮ ಭಾಜನರಾಗಿದ್ದಾರೆ.

ಪ್ರಶಸ್ತಿಯು ₹10 ಸಾವಿರ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಫೆ.4ರಂದು ಬೆಳಗ್ಗೆ 10ಕ್ಕೆ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಪ್ರಶಸ್ತಿ ಪ್ರದಾನ ಮಾಡುವರು. ಬೆಂಗಳೂರು ನಗರ ಜಿಲ್ಲೆ ಕಸಾಪ ಅಧ್ಯಕ್ಷ ಎಂ.ಪ್ರಕಾಶಮೂರ್ತಿ ಅಧ್ಯಕ್ಷತೆ ವಹಿಸುವರು. ಮೈಕೊ ಕನ್ನಡ ಬಳಗದ ಗೌರವಾಧ್ಯಕ್ಷೆ ಡಾ। ಪದ್ಮನಿ ನಾಗರಾಜು ಉಪಸ್ಥಿತರಿರುವರು.ಅನಸೂಯಮ್ಮ ಅವರು 70ರ ದಶಕದಲ್ಲಿ ಸ್ಥಳೀಯವಾಗಿ ಗೇಣಿದಾರರ ಹೋರಾಟವನ್ನು ರೂಪಿಸಿದವರು. ನಂತರ ಕರ್ನಾಟಕದಲ್ಲಿ ರೈತ ಚಳವಳಿ ಆರಂಭವಾದಾಗಿನಿಂದಲೂ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು. ಸಮಾಜವಾದಿ ರಾಮಮನೋಹರ ಲೋಹಿಯಾ ಅವರ ಚಿಂತನೆಗಳ ಹಿನ್ನೆಲೆಯಲ್ಲಿ ಅರಳಾಳುಸಂದ್ರದಲ್ಲಿ ಸ್ಥಾಪಿಸಿದ ''''ಸಮತಾ ವಿದ್ಯಾಲಯ''''ದ ಸ್ಥಾಪಕ ಟ್ರಸ್ಟಿಯಾಗಿದ್ದಾರೆ ಎಂದು ಬೆಂಗಳೂರು ನಗರ ಜಿಲ್ಲೆ ಕಸಾಪ ಪ್ರಕಟಣೆಯಲ್ಲಿ ತಿಳಿಸಿದೆ.