ಸಾರಾಂಶ
, ವರ್ಣಿಸಲು ಅಸಾಧ್ಯವಾದ ವ್ಯಕ್ತಿ ತಾಯಿಯಾಗಿದ್ದಾಳೆ. ಅವಳನ್ನು ಇಳಿ ವಯಸ್ಸಲ್ಲಿ ಸರಿಯಾಗಿ ನೋಡಿಕೊಳ್ಳದೆ ವೃದ್ಧಾಶ್ರಮಕ್ಕೆ ನೂಕುವ ಕೆಲಸ ಮಾಡಬಾರದು
ಕನ್ನಡಪ್ರಭ ವಾರ್ತೆ ಮೈಸೂರು
ಒಂಬತ್ತು ತಿಂಗಳು ಹೊತ್ತು ಹೆತ್ತು ತನ್ನ ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುವ ಹಾಗೂ ಪೋಷಿಸುವ ತಾಯಿಗೆ ಸಮಾನವಾದ ಮತ್ತೊಬ್ಬ ವ್ಯಕ್ತಿ ಜಗತ್ತಿನಲ್ಲಿ ಯಾರು ಇಲ್ಲ ಎಂದು ಆದಿಚುಂಚನಗಿರಿ ಮಹಿಳಾ ಸಮಾಜದ ಅಧ್ಯಕ್ಷೆ ಸವಿತಾ ಗೌಡ ತಿಳಿಸಿದರು.ನಗರದ ನಜರ್ ಬಾದ್ ನಲ್ಲಿರುವ ಶಾಂತವೇರಿ ಗೋಪಾಲಗೌಡ ಮೆಮೋರಿಯಲ್ ಆಸ್ಪತ್ರೆಯಲ್ಲಿ ವಿಶ್ವ ತಾಯಂದಿರ ದಿನಾಚರಣೆಯ ಅಂಗವಾಗಿ ನಗರದ ಸಮಸ್ಯೆಯ ಬಗ್ಗೆ ಉಪನ್ಯಾಸ ಮತ್ತು ಸಂವಾದ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ವರ್ಣಿಸಲು ಅಸಾಧ್ಯವಾದ ವ್ಯಕ್ತಿ ತಾಯಿಯಾಗಿದ್ದಾಳೆ. ಅವಳನ್ನು ಇಳಿ ವಯಸ್ಸಲ್ಲಿ ಸರಿಯಾಗಿ ನೋಡಿಕೊಳ್ಳದೆ ವೃದ್ಧಾಶ್ರಮಕ್ಕೆ ನೂಕುವ ಕೆಲಸ ಮಾಡಬಾರದು ಎಂದರು.
ನರರೋಗ ತಜ್ಞ ಡಾ. ಶುಶ್ರೂತ್ ಗೌಡರು ತಾಯಂದಿರಿಗೆ ಉಚಿತ ಆರೋಗ್ಯ ತಪಾಸಣೆಯನ್ನು ನಡೆಸಿದರು. 70 ಹೆಚ್ಚು ಮಂದಿ ಶಿಬಿರದಲ್ಲಿ ಪಾಲ್ಗೊಂಡಿದ್ದರು.ಪದಾಧಿಕಾರಿಗಳಾದ ಉಮಾ, ನಿರ್ಮಲಾ ಮುಕುಂದ್, ಸುವರ್ಣ ಗಣೇಶ್, ಗೌರಿ ಸಣ್ಣಲಿಂಗೆಗೌಡ, ಶೋಭಾ ಮೊದಲಾದವರು ಇದ್ದರು.