ಉನ್ನತ ಶಿಕ್ಷಣದ ಜತೆಗೆ ಭವಿಷ್ಯ ರೂಪಿಸಿಕೊಳ್ಳಿ

| Published : May 19 2025, 12:06 AM IST

ಉನ್ನತ ಶಿಕ್ಷಣದ ಜತೆಗೆ ಭವಿಷ್ಯ ರೂಪಿಸಿಕೊಳ್ಳಿ
Share this Article
  • FB
  • TW
  • Linkdin
  • Email

ಸಾರಾಂಶ

ಶಿಕ್ಷಣ ಸಂಸ್ಥೆಯು ಪ್ರಾಥಮಿಕ ಹಂತದಿಂದ ವೈವಿಧ್ಯಮಯ ಕೋರ್ಸ್‌ ಸ್ಥಾಪಿಸಿದ್ದು, ವಜ್ರಮಹೋತ್ಸವ ಆಚರಣೆಗೆ ಮುಂದಾಗಿರುವುದು ಸಂತಸದಾಯಕವಾಗಿದೆ

ಗಂಗಾವತಿ: ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಜತೆಗೆ ತಮ್ಮ ಮುಂದಿನ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

ನಗರದ ಗುಂಜಳ್ಳಿ ಹಿರೇನಾಗಪ್ಪ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ಪ್ರಧಾನ ಸಮಾರಂಭದಲ್ಲಿ ಮಾತನಾಡಿದರು.

ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘ ಹಲವು ದಶಕಗಳಿಂದ ಗುಣಮಟ್ಟದ ಶಿಕ್ಷಣ ನೀಡುತ್ತಾ ಬರಲಾಗಿದ್ದು, ಪ್ರಸ್ತುತ ದಿನಗಳಲ್ಲಿ ಶಿಕ್ಷಣದ ಜತೆಗೆ ಉದ್ಯೋಗಾವಕಾಶ ಕಲ್ಪಿಸುವುದರ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿದೀಪವಾಗಿದ್ದು ಇದರ ಸದುಪಯೋಗ ಪದವಿ ಪಡೆದ ವಿದ್ಯಾರ್ಥಿಗಳು ಪಡೆದುಕೊಂಡು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಹೇಳಿದರು.

ಶಿಕ್ಷಣ ಸಂಸ್ಥೆಯು ಪ್ರಾಥಮಿಕ ಹಂತದಿಂದ ವೈವಿಧ್ಯಮಯ ಕೋರ್ಸ್‌ ಸ್ಥಾಪಿಸಿದ್ದು, ವಜ್ರಮಹೋತ್ಸವ ಆಚರಣೆಗೆ ಮುಂದಾಗಿರುವುದು ಸಂತಸದಾಯಕವಾಗಿದೆ ಎಂದರು.

ಸಾನ್ನಿಧ್ಯವನ್ನು ಡಾ.ಕೊಟ್ಟೂರು ಮಹಾಸ್ವಾಮೀಗಳು ವಹಿಸಿದ್ದರು. ಇದೇ ಸಂದರ್ಭದಲ್ಲಿ ಇದೇ ಶಾಲೆಯಲ್ಲಿ ಶಿಕ್ಷಣ ಪಡೆದು ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತ ಗೊಂಡ ವೀರೇಶ್ ಯಾವಗಲ್ ಹಾಗೂ ಅಮೇರಿಕದಿಂದ ಡಾಕ್ಟರೇಟ್ ಪ್ರಶಸ್ತಿ ಪಡೆದುಕೊಂಡ ಕೆ.ಎಂ.ಬಸವರಾಜ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಪ್ರಾಚಾರ್ಯ ಬಸವರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ಕಾರ್ಯದರ್ಶಿ ಶರಣೆಗೌಡ ಮಾಲಿಪಾಟೀಲ್. ಸಹ ಕಾರ್ಯದರ್ಶಿ ಎಚ್.ಎಂ.ಮಂಜುನಾಥ್. ಸೇರಿದಂತೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.