ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಹಾಗೂ ಶಾರದಾ ಪೂಜಾ ಉತ್ಸವ ಸಮಿತಿಯ ಆಶ್ರಯದಲ್ಲಿ ಕಲ್ಲಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶ್ರೀ ಶಾರದಾ ಪೂಜಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ

ಬಂಟ್ವಾಳ: ತಂದೆ-ತಾಯಿಗಳ ಋಣವನ್ನು ಮಕ್ಕಳು ಸದಾ ಸ್ಮರಿಸಿ, ಅವರ ಸೇವೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ದುಷ್ಟಶಕ್ತಿಗಳ ಮೋಸದ ಆಲೋಚನೆಗಳಿಗೆ ಶಕ್ತಿ ದೇವತೆಯ ಆಯುಧದಂತೆ ಧೈರ್ಯದಿಂದ ಉತ್ತರಿಸುವ ಅಗತ್ಯವಿದೆ ಎಂದು ಉಜಿರೆಯ ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿಭಾಗ ಮುಖ್ಯಸ್ಥ ರವೀಶ್ ಪಡುಮಲೆ ಹೇಳಿದರು.

ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಹಾಗೂ ಶಾರದಾ ಪೂಜಾ ಉತ್ಸವ ಸಮಿತಿಯ ಆಶ್ರಯದಲ್ಲಿ ಕಲ್ಲಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶ್ರೀ ಶಾರದಾ ಪೂಜಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ ಅವರು, ನವರಾತ್ರಿಯ ಕೊನೆಯಲ್ಲಿ ದೇವತೆಗಳು ದುಷ್ಟಶಕ್ತಿಗಳನ್ನು ನಿಗ್ರಹಿಸಿದಂತೆ, ನಮ್ಮೊಳಗಿನ ದುಷ್ಟ ಚಿಂತನೆಗಳು ಹಾಗೂ ದುಶ್ಚಟಗಳೂ ನಾಶವಾಗಬೇಕು ಎಂದರು.ರಾಜ್ಯ ಬಾಲಭವನ ಸೊಸೈಟಿಯ ಮಾಜಿ ಅಧ್ಯಕ್ಷೆ ಸುಲೋಚನಾ ಜಿ. ಕೆ. ಭಟ್ ಅಧ್ಯಕ್ಷತೆ ವಹಿಸಿದ್ದರು. ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಸುಧಾಕರ ರೈ ಬೋಳಂತೂರು, ಗೋಳ್ತಮಜಲು ಗ್ರಾಮ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನೀಲ್ ಕುಮಾರ್, ಕೊಳಕೀರು ತುಡರ್‌ನ ಅಧ್ಯಕ್ಷ ಶಿವಪ್ರಸಾದ್ ಕೊಟ್ಟಾರಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವಕೀಲ ಶುಕರಾಜ ಎಸ್. ಕೊಟ್ಟಾರಿ ಹಾಗೂ ಶಿವಂ ಕಡೇಶಿವಾಲಯದ ಸಂಚಾಲಕ ಸಂಪತ್ ಕಡೇಶಿವಾಲಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು .ಕಾರ್ಯಕ್ರಮದಲ್ಲಿ ನೆಟ್ಟ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ಡೋಲು ವಾದಕ ಶ್ರೀನಿವಾಸ ದೇವಾಡಿಗ ಅವರಿಗೆ ಗ್ರಾಮ ಗೌರವ ನೀಡಿ ಸನ್ಮಾನಿಸಲಾಯಿತು. ಚಲನಚಿತ್ರ ನಿರ್ದೇಶಕ ಪ್ರಶಾಂತ್ ಆಳ್ವ ಅವರಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.

ಕೆ. ಶಾಂತರಾಮ ಆಚಾರ್ ಅವರ ಸ್ಮರಣಾರ್ಥ ನೀಡಲಾಗುವ ‘ಶಾಂತಶ್ರೀ’ ಪ್ರಶಸ್ತಿಯನ್ನು ಈ ಬಾರಿ ಕಲಾಸೇವೆಗಾಗಿ ಹಿರಿಯ ಕಲಾವಿದ ಬಿ. ಕೆ. ರಾಜ್ ನಂದಾವರ ಅವರಿಗೆ ಪ್ರದಾನ ಮಾಡಿ ಗೌರವಿಸಲಾಯಿತು.ಎಸ್.ಎಸ್.ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ಶಾರದಾ ಪೂಜಾ ಉತ್ಸವ ಸಮಿತಿ ಅಧ್ಯಕ್ಷ ಗಣೇಶ್ ಶೆಟ್ಟಿ ಹಾಗೂ ಕಾರ್ಯದರ್ಶಿ ರಾಜೇಶ್ ಆಚಾರ್ಯ ಉಪಸ್ಥಿತರಿದ್ದರು. ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಯತೀನ್ ಕಲ್ಲಡ್ಕ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ವಜ್ರನಾಥ ಕಲ್ಲಡ್ಕ ವಂದಿಸಿದರು. ರಾಜೇಶ್ ಕೊಟ್ಟಾರಿ ಕಾರ್ಯಕ್ರಮ ನಿರ್ವಹಿಸಿದರು.