16ರಂದು ಶಾರದಾ ಪುರಸ್ಕಾರ ರಾಜ್ಯ ಪ್ರಶಸ್ತಿ ಪ್ರದಾನ

| Published : Jun 13 2024, 12:53 AM IST

ಸಾರಾಂಶ

ದಾವಣಗೆರೆಯ ಶ್ರೀಮತಿ ಪ್ರೇಮಾ ಅರುಣಾಚಲ ಎನ್. ರೇವಣಕರ್ ಪ್ರತಿಷ್ಠಾನದಿಂದ 2023- 2024ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ದೈವಜ್ಞ ಬ್ರಾಹ್ಮಣ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ “ಶಾರದಾ ಪುರಸ್ಕಾರ” ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ. ಜೂ.16ರಂದು ವಿನೋಬನಗರದ 1ನೇ ಮುಖ್ಯ ರಸ್ತೆಯ ಶ್ರೀಮತಿ ಗೌರಮ್ಮ ನರಹರಿ ಶೇಟ್ ಸಭಾ ಭವನದಲ್ಲಿ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಗೌರವ ಸಲಹೆಗಾರ ಸಾಲಿಗ್ರಾಮ ಗಣೇಶ್‌ ಶೆಣೈ ದಾವಣಗೆರೆಯಲ್ಲಿ ಹೇಳಿದ್ದಾರೆ.

- ಶ್ರೀಮತಿ ಗೌರಮ್ಮ ನರಹರಿ ಶೇಟ್ ಸಭಾ ಭವನದಲ್ಲಿ ಸಮಾರಂಭ: ಗಣೇಶ ಶೆಣೈ- - - ಕನ್ನಡಪ್ರಭ ವಾರ್ತೆ, ದಾವಣಗೆರೆ ದಾವಣಗೆರೆಯ ಶ್ರೀಮತಿ ಪ್ರೇಮಾ ಅರುಣಾಚಲ ಎನ್. ರೇವಣಕರ್ ಪ್ರತಿಷ್ಠಾನದಿಂದ 2023- 2024ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ದೈವಜ್ಞ ಬ್ರಾಹ್ಮಣ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ “ಶಾರದಾ ಪುರಸ್ಕಾರ” ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ. ಜೂ.16ರಂದು ವಿನೋಬನಗರದ 1ನೇ ಮುಖ್ಯ ರಸ್ತೆಯ ಶ್ರೀಮತಿ ಗೌರಮ್ಮ ನರಹರಿ ಶೇಟ್ ಸಭಾ ಭವನದಲ್ಲಿ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಗೌರವ ಸಲಹೆಗಾರ ಸಾಲಿಗ್ರಾಮ ಗಣೇಶ್‌ ಶೆಣೈ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ಅಂದು ಬೆಳಗ್ಗೆ 10.35ಕ್ಕೆ ಹಿರಿಯ ಕವಿ, ಸಾಹಿತಿ ಬೆಂಗಳೂರಿನ ಬಿ.ಆರ್. ಲಕ್ಷ್ಮಣ್‌ ರಾವ್ ಸಮಾರಂಭ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಪ್ರತಿಷ್ಠಾನದ ಸಂಸ್ಥಾಪಕ ಡಾ.ನಲ್ಲೂರು ಅರುಣಾಚಲ ಎನ್. ರೇವಣಕರ್ ವಹಿಸುವರು ಎಂದರು.

ಮುಖ್ಯ ಅತಿಥಿಗಳಾಗಿ ಹಿರಿಯ ಚುಟುಕು ಕವಿ ಬೆಂಗಳೂರಿನ ಎಚ್.ಡುಂಡಿರಾಜ್, ಬೆಳಗಾವಿಯ ದೈವಜ್ಞ ಸಮಾಜದ ಅಧ್ಯಕ್ಷ ದಯಾನಂದ ಜಿ. ನೇತಲ್‌ಕರ್, ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೇಮಾ ಅರುಣಾಚಲ ಎನ್.ರೇವಣಕರ್, ದಾವಣಗೆರೆಯ ಸರಾಫ್ ಜ್ಯೂಯಲರ್ಸ್‌ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ನಲ್ಲೂರು ರಾಜಕುಮಾರ್ ಭಾಗವಹಿಸುವರು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಎನ್.ಅರುಣಾಚಲ, ಪ್ರೇಮಾ ಅರುಣಾಚಲ, ನಲ್ಲೂರು ಲಕ್ಷ್ಮಣ ರಾವ್ ಇತರರು ಇದ್ದರು.

- - - -12ಕೆಡಿವಿಜಿ32ಃ:

ದಾವಣಗೆರೆಯಲ್ಲಿ ಶ್ರೀಮತಿ ಪ್ರೇಮಾ ಅರುಣಾಚಲ ಎನ್. ರೇವಣಕರ್ ಪ್ರತಿಷ್ಠಾನದಿಂದ ಶಾರದಾ ಪುರಸ್ಕಾರ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಿರುವ ಕುರಿತು ಸಾಲಿಗ್ರಾಮ ಗಣೇಶ ಶೆಣೈ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.