ಸಾರಾಂಶ
ಅ.10 ರಂದು ನಡೆಯುವ ಶಾರದಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಶೋಕ್ ಕಾಮತ್ ಮತ್ತು ಶಾರದ ಮಹೋತ್ಸವ ಸಮಿತಿಯ ಸಾಂಸ್ಕೃತಿಕ ಸ್ಪರ್ಧಾ ಸಂಚಾಲಕ ಡಾ. ರಾಮಕೃಷ್ಣ ಶಿರೂರು ತಿಳಿಸಿದ್ದಾರೆ.
ಮೂಡುಬಿದಿರೆ: ಮೂಡುಬಿದಿರೆಯ ಪೊನ್ನೆಚಾರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯ ಸಮಿತಿಯು ಶಾರದಾ ಮಹೋತ್ಸವ ಕಾರ್ಯಕ್ರಮದಲ್ಲಿ ನೀಡಲಾಗುವ ‘ಶಾರದಾನುಗ್ರಹ-2024 ಪ್ರಶಸ್ತಿ’ಗೆ ಅಲಂಗಾರು ಈಶ್ವರ ಭಟ್ ಅವರನ್ನು ಆಯ್ಕೆ ಮಾಡಿದೆ ಎಂದು ದೇವಾಲಯದ ಆಡಳಿತ ಮೊಕ್ತಸರ ಅಶೋಕ ಕಾಮತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೊನ್ನಚಾರಿ ಲಕ್ಷ್ಮಿ ವೆಂಕಟರಮಣ ದೇವಾಲಯದಲ್ಲಿ ನಡೆಯುವ ಶಾರದಾ ಮಹೋತ್ಸವ ಮುಡುಬಿದಿರೆ ದಸರಾ-2024ರ ಸಂಭ್ರಮದಲ್ಲಿ ಧಾರ್ಮಿಕ ಮುಂದಾಳು, ಹಿರಿಯ ವೇದ ವಿದ್ವಾಂಸ ವೇದಮೂರ್ತಿ ಬ್ರಹ್ಮಶ್ರೀ ಅಲಂಗಾರು ಈಶ್ವರ ಭಟ್ಟರ ನೇತೃತ್ವದಲ್ಲಿ ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಧಾರ್ಮಿಕ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಜನರಲ್ಲಿ ಧಾರ್ಮಿಕ ಮತ್ತು ಆಧ್ಯಾತ್ಮಿಕ ಭಾವನೆಯನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ 2024ನೇ ಸಾಲಿನ ಶಾರದಾನುಗ್ರಹ-2024 ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಹೇಳಿದರು.ಅ.10 ರಂದು ನಡೆಯುವ ಶಾರದಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಶೋಕ್ ಕಾಮತ್ ಮತ್ತು ಶಾರದ ಮಹೋತ್ಸವ ಸಮಿತಿಯ ಸಾಂಸ್ಕೃತಿಕ ಸ್ಪರ್ಧಾ ಸಂಚಾಲಕ ಡಾ. ರಾಮಕೃಷ್ಣ ಶಿರೂರು ತಿಳಿಸಿದ್ದಾರೆ.