ಉಡುಪಿ: ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ 7275 ಕಾರ್ಮಿಕರನ್ನು ನೋಂದಾಯಿಸಲು ಗುರಿ ನೀಡಲಾಗಿತ್ತು, ಅದರಂತೆ ಇದುವರೆಗೆ 7225 ಕಾರ್ಮಿಕರನ್ನು ನೋಂದಾಯಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಹೇಳಿದರು.ಅವರು ಮಂಗಳವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಮಾಹಿತಿ ನೀಡಿದರು.
ವಿಶೇಷ ನೋಂದಣಿ ಅಭಿಯಾನವನ್ನು ನಡೆಸಿ ಇನ್ನೂ ಹೆಚ್ಚಿನ ಕಾರ್ಮಿಕರನ್ನು ಈ ಯೋಜನೆಯಡಿ ಸೇರ್ಪಡೆಗೊಳಿಸಬೇಕು ಮುಖ್ಯವಾಗಿ ಮನೆಗೆಲಸ ಮಾಡುವ ಮಹಿಳೆಯರನ್ನು ಹೆಚ್ಚು ಸಂಖ್ಯೆಯಲ್ಲಿ ನೋಂದಾಯಿಸಬೇಕು ಎಂದವರು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಅಸಂಘಟಿತ ಕಾರ್ಮಿಕರಿಗೆ ತಮ್ಮ ಜೀವನದ ಸಂಧ್ಯಾಕಾಲದಲ್ಲಿ ದುಡಿದು ತಮ್ಮನ್ನು ಪೋಷಿಸಿಕೊಳ್ಳಲು ಆರ್ಥಿಕ ಮೂಲಗಳು ಇರುವುದಿಲ್ಲ. ಇಂತಹ ಅಸಂಘಟಿತ ಕಾರ್ಮಿಕರಿಗಾಗಿಯೇ ಕೇಂದ್ರ ಸರ್ಕಾರವು ಈ ಮಹತ್ವಾಕಾಂಕ್ಷಿ ವಂತಿಕೆ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ. ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಬೇಕು ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ವಿವಿಧ ಜಿಲ್ಲಾ ಮಟ್ಟದ ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಮಾ. 15ರವರೆಗೆ ನೋಂದಣಿ ಅಭಿಯಾನ: ಪಿಎಂ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ ಕಾರ್ಮಿಕರ ನೋಂದಣಿಗೆ ಜಿಲ್ಲೆಯಲ್ಲಿ ಮಾ. 15ರವರೆಗೆ ವಿಶೇಷ ನೋಂದಣಿ ಅಭಿಯಾನ ನಡೆಯುತಿದೆ. 18 ರಿಂದ 40 ವರ್ಷದ ಕಾರ್ಮಿಕರು ಆಧಾರ್ ಕಾರ್ಡ್, ಅದಕ್ಕೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಹಾಗೂ ಮೊದಲನೇ ತಿಂಗಳ ವಂತಿಕೆಯೊಂದಿಗೆ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಆದಾಯ ತೆರಿಗೆ ಪಾವತಿದಾರರು, ಸಂಘಟಿತ ಕಾರ್ಮಿಕರು, ಇ.ಎಸ್.ಐ/ ಪಿ.ಎಫ್ ಯೋಜನೆಗೆ ಒಳಪಟ್ಟವರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.ಶ್ರಮಯೋಗಿ ಯೋಜನೆಯಲ್ಲಿ 7225 ನೋಂದಣಿ: ಸ್ವರೂಪ ಟಿ. ಕೆ.
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.