ಸಾರಾಂಶ
ಮುಂಡರಗಿ: ಜು. 8ರಿಂದ ಮುಂಡರಗಿ ತೋಂಟದಾರ್ಯ ಮಠದಲ್ಲಿ ಆಷಾಢ ಮಾಸದ ಅಂಗವಾಗಿ ಪ್ರತಿದಿನ ಸಂಜೆ 7 ಗಂಟೆಗೆ ಅತ್ತೀವೇರಿ ಬಸವಧಾಮದ ಬಸವೇಶ್ವರಿ ಮಾತಾಜಿಯವರಿಂದ ಶರಣ ಚರಿತಾಮೃತ ಪ್ರವಚನ ಜರುಗಲಿದೆ ಎಂದು ಶ್ರೀಮಠದ ಹಿರಿಯರಾದ ಕೊಟ್ರೇಶ ಅಂಗಡಿ ಹೇಳಿದರು.
ಅವರು ಭಾನುವಾರ ಶ್ರೀಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಜು.8ರಂದು ಸಂಜೆ 7 ಗಂಟೆಗೆ ಪ್ರವಚನ ಕಾರ್ಯಕ್ರಮದ ಉದ್ಘಾಟನೆ ಜರುಗಲಿದ್ದು, ಮುಂಡರಗಿ ತೋಂಟದಾರ್ಯ ಮಠದ ಪೀಠಾಧಿಪತಿ ಜ.ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಸಾನಿಧ್ಯವಹಿಸಲಿದ್ದಾರೆ. ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪ್ರವಚನ ಸೇವಾ ಸಮಿತಿ ಅಧ್ಯಕ್ಷ ಬಸಯ್ಯ ಗಿಂಡಿಮಠ ಅಧ್ಯಕ್ಷತೆ ವಹಿಸಲಿದ್ದಾರೆ.ಅತಿಥಿಗಳಾಗಿ ಮಾಜಿ ಸಚಿವ ಎಸ್.ಎಸ್. ಪಾಟೀಲ, ರೋಣ ಶಾಸಕ ಜಿ.ಎಸ್. ಪಾಟೀಲ, ಕೆಪಿಸಿಸಿ ಸದಸ್ಯ ಆನಂದ ಗಡ್ಡದೇವರಮಠ, ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಡಿ.ಡಿ. ಮೋರನಾಳ, ಬಿಜೆಪಿ ಮುಂಡರಗಿ ಮಂಡಲದ ಅಧ್ಯಕ್ಷ ಹೇಮಗಿರೀಶ ಹಾವಿನಾಳ, ಪುರಸಭೆ ಅಧ್ಯಕ್ಷ ನಿರ್ಮಲಾ ಕೊರ್ಲಹಳ್ಳಿ, ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ರಾಜೀವಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸಿನೆಟ್ ಸದಸ್ಯ ಡಾ. ವೀರೇಶ ಹಂಚಿನಾಳ, ಕಪ್ಪತ್ ಹಿಲ್ಸ್ ವಲಯ ಅರಣ್ಯಾಧಿಕಾರಿ ಮಂಜುನಾಥ ಮೇಗಳಮನಿ ಅವರಿಗೆ ಪುರಸ್ಕಾರ ಜರುಗಲಿದೆ.
ಮೃತ್ಯುಂಜಯ ಹಿರೇಮಠ ಹಾಗೂ ಜಯಶ್ರೀ ಅಳವಂಡಿ ಅವರಿಂದ ಸಂಗೀತ ಸೇವೆ ಜರುಗಲಿದ್ದು, ಅವರಿಗೆ ಹೇಮಂತಕುಮಾರ ಹಿರೇಮಠ ಹಾಗೂ ಶಿವಕುಮಾರ ಕುಬಸದ ತಬಲಾ ಸಾಥ್ ನೀಡಲಿದ್ದಾರೆ. ಕಮಲಮ್ಮ ಹನಮಂತಗೌಡ ಪಾಟೀಲ, ಕಸ್ತೂರಮ್ಮ ಈಶ್ವರಪ್ಪ ನಾವಿ, ಬಸವರಾಜ ಹೂಗಾರ ಪ್ರಸಾದ ಸೇವೆ ನೆರವೇರಿಸಲಿದ್ದಾರೆ ಎಂದರು. ಪ್ರವಚನ ಸೇವಾ ಸಮಿತಿ ಅಧ್ಯಕ್ಷ ಬಸಯ್ಯ ಗಿಂಡಿಮಠ ಮಾತನಾಡಿ, ಪ್ರತಿ ದಿನ ಪ್ರವಚನದ ನಂತರ ಪ್ರಸಾದ ವ್ಯವಸ್ಥೆ ಇರುತ್ತದೆ. 15 ದಿನಗಳ ಕಾಲ ಜರುಗುವ ಪ್ರವಚನ ಕಾರ್ಯಕ್ರಮದ ಮಧ್ಯದಲ್ಲಿ ಆಗಾಗ ವಿಶೇಷ ಕಾರ್ಯಕ್ರಮಗಳು ಸಹ ಜರುಗಲಿವೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.ಸುದ್ದಿಗೋಷ್ಠಿಯಲ್ಲಿ ಎಚ್. ವಿರೂಪಾಕ್ಷಗೌಡ, ಈಶಣ್ಣ ಬೆಟಗೇರಿ, ಎಸ್.ಎಸ್. ಗಡ್ಡದ, ಪಾಲಾಕ್ಷಿ ಗಣದಿನ್ನಿ, ದೇವು ಹಡಪದ, ಎಸ್.ವಿ. ಕೊಪ್ಪಳ, ವಿಶ್ವನಾಥ ಉಳ್ಳಾಗಡ್ಡಿ, ಶಿವು ವಾಲಿಕಾರ, ಸದಾಶಿವಯ್ಯ ಕಬ್ಬೂರಮಠ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.