ಸಾರಾಂಶ
ಕೂಡಲಸಂಗಮದಲ್ಲಿ ಆಯೋಜಿಸಿರುವ ೩೭ನೇ ಶರಣ ಮೇಳವನ್ನು ಸಿಎಂ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ವಿಜಯ್ ಕುಮಾರ್ ಗದನಕೇರಿ ತಿಳಿಸಿದರು
ಇಳಕಲ್: ೮೬೧ನೇ ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಸುಕ್ಷೇತ್ರ ಕೂಡಲಸಂಗಮದಲ್ಲಿ ಆಯೋಜಿಸಿರುವ ೩೭ನೇ ಶರಣ ಮೇಳವನ್ನು ಸಿಎಂ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ವಿಜಯ್ ಕುಮಾರ್ ಗದನಕೇರಿ ತಿಳಿಸಿದರು.
ಶಾಸಕ ವಿಜಯಾನಂದ ಕಾಶಪ್ಪನವರ ಅವರ ಇಳಕಲ್ ನಗರದ ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಜ.೧೩ ರಂದು ಮಧ್ಯಾಹ್ನ ೩.೩೦ಕ್ಕೆ ಶರಣ ಮೇಳ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೆರವೇರಿಸಲಿದ್ದಾರೆ. ಸಾನ್ನಿಧ್ಯವನ್ನು ಇಳಕಲ್ ಶ್ರೀಮಠದ ಪೂಜ್ಯ ಗುರು ಮಹಾಂತ ಶ್ರೀಗಳು ವಹಿಸಲಿದ್ದಾರೆ. ಶಾಸಕ ವಿಜಯಾನಂದ ಕಾಶಪ್ಪನವರ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಲ್ಲದೆ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ ಪೂಜ್ಯರು ಹಾಗೂ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಚಿತ್ರನಟ ಡಾಲಿ ಧನಂಜಯ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.ಜಿಪಂ ಮಾಜಿ ಸದಸ್ಯ ಮಹಾಂತೇಶ್ ನರಗುಂದ ಮಾತನಾಡಿ, ೩೭ನೇ ಶರಣ ಮೇಳದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರಮುಖರು, ಭಕ್ತಾದಿಗಳು ಸೇರಿದಂತೆ ಸರ್ವರೂ ಪಾಲ್ಗೊಳ್ಳುವಂತೆ ಕೊರಿದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಬಸವರಾಜ್ ಜಾಲಿಹಾಳ್, ಮಲ್ಲೇಶ್, ಚಂದ್ರಶೇಖರ, ನಗರ ಸಭೆ ನಾಮ ನಿರ್ದೇಶಕ ಸದಸ್ಯ ಯಲ್ಲಪ್ಪ ರಾಜಪುರ್ ಉಪಸ್ಥಿತರಿದ್ದರು.