ಶರಣರ ತತ್ವಾದರ್ಶಗಳು ಬದುಕಿಗೆ ದಾರಿದೀಪ: ಡಿಸಿ ಡಾ. ಸುಶೀಲಾ

| Published : May 10 2024, 11:48 PM IST

ಸಾರಾಂಶ

ಡಿಸಿ ಕಚೇರಿಯಲ್ಲಿ ವಿಶ್ವಗುರು ಬಸವಣ್ಣ, ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಕನ್ನಡಪ್ರಭ ವಾರ್ತೆ ಯಾದಗಿರಿ

ಸಾಂಸ್ಕೃತಿಕ ನಾಯಕ, ಜಗಜ್ಯೋತಿ ಬಸವಣ್ಣ ಹಾಗೂ ಹೇಮರೆಡ್ಡಿ ಮಲ್ಲಮ್ಮನವರ ತತ್ವಾದರ್ಶಗಳು ಬದುಕಿಗೆ ದಾರಿದೀಪ ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಅಭಿಪ್ರಾಯಪಟ್ಟರು.

ಲೋಕಸಭಾ ಚುನಾವಣೆ ನಿಮಿತ್ಯ, ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಶ್ರೀ ಬಸವೇಶ್ವರ ಹಾಗೂ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿ ಪ್ರಯುಕ್ತ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು.

ಭಕ್ತಿ ಭಂಡಾರಿ, ವಿಶ್ವಗುರು ಬಸವಣ್ಣನವರು ತಮ್ಮ ವಚನಗಳ ಮೂಲಕವೇ ಸಮಾಜದಲ್ಲಿ ಬಹುದೊಡ್ಡ ಬದಲಾವಣೆ ತಂದು ಜನರಲ್ಲಿ ಜ್ಞಾನದ ದೀವಿಗೆ ಹಚ್ಚಿದ ಮಹಾನ್ ಮಾನವತಾವಾದಿ ಎಂದರು.

ಸ್ತ್ರೀ ಕುಲಕ್ಕೆ ಮಾದರಿಯಾಗಿ, ಸಮಾಜದ ಉದ್ಧಾರಕ್ಕಾಗಿ, ಭಕ್ತಿಯ ಸಾಕಾರಮೂರ್ತಿಯಾದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಧರ್ಮ ನಿಷ್ಠೆ, ಧಾರ್ಮಿಕ ಭಾವನೆ ಎಂದಿಗೂ ಆದರ್ಶಪ್ರಾಯವಾಗಿದೆ ಎಂದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಮುಖಂಡರಾದ ಶರಣುಗೌಡ ಪೊಲೀಸ್ ಪಾಟೀಲ ಯಡ್ಡಳ್ಳಿ, ಸಾಹೇಬರೆಡ್ಡಿ ಬಿ. ದೇಶಪಾಂಡೆ, ಜಗನ್ನಾಥ ರೆಡ್ಡಿ, ಶಿವಪ್ರಕಾಶಗೌಡ ಯಡ್ಡಳ್ಳಿ, ಸಾಹಿತಿ ವಿಶ್ವನಾಥ ರೆಡ್ಡಿ ಗೊಂದಡಗಿ, ಉಪನ್ಯಾಸಕ ಗುರುಪ್ರಸಾದ್ ವೈದ್ಯ ಸೇರಿ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ವರ್ಕನಳ್ಳಿ, ಭಗತ್ ವಾಡೇಕರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.