ರಾಮನಾಥಪುರ ಬಸವೇಶ್ವರ ವೃತ್ತದಲ್ಲಿರುವ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಚನ ಕಂಠ ಮಾಡಿದ ವಿದ್ಯಾರ್ಥಿಗಳಿಗೆ ವಚನ ಪುಸ್ತಕ ವಿತರಣೆ ಹಾಗೂ ಶರಣೆ ನಂಜಮ್ಮ ತಮ್ಮಣ್ಣಗೌಡರ ದತ್ತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 12ನೇ ಶತಮಾನದಲ್ಲಿ ಶರಣರು ಮಾಡಿದ ಅಂದಿನ ವಚನಗಳನ್ನು ಇವತ್ತಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ 1986ರಲ್ಲಿ ಸುತ್ತೂರಿನ ರಾಜೇಂದ್ರ ಸ್ವಾಮೀಜಿಯವರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅನ್ನು ಹುಟ್ಟುಹಾಕಿದ್ದು, ನೂರಾರು ಶರಣರು ದತ್ತಿಗಳನ್ನು ಇಡುವ ಮೂಲಕ ಶರಣರ ವಚನಗಳನ್ನು ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ತಿಳಿಸುವುದೇ ಶರಣ ಸಾಹಿತ್ಯ ಪರಿಷತ್ತಿನ ಉದ್ದೇಶ ಎಂದರು.
ಕನ್ನಡಪ್ರಭ ವಾರ್ತೆ ರಾಮನಾಥಪುರ
ಶರಣ ಸಾಹಿತ್ಯ ಪರಿಷತ್ತು ಯಾವುದೇ ಜಾತಿ ವರ್ಗಕ್ಕೆ ಸೀಮಿತವಾಗಿರದೇ ಎಲ್ಲಾ ವರ್ಗಕ್ಕೂ ಸೇರಿದ್ದಾಗಿದೆ ಎಂದು ರಾಮನಾಥಪುರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು ಎಂ. ಆರ್. ದೇವರಾಜು ತಿಳಿಸಿದರು. ರಾಮನಾಥಪುರ ಬಸವೇಶ್ವರ ವೃತ್ತದಲ್ಲಿರುವ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಚನ ಕಂಠ ಮಾಡಿದ ವಿದ್ಯಾರ್ಥಿಗಳಿಗೆ ವಚನ ಪುಸ್ತಕ ವಿತರಣೆ ಹಾಗೂ ಶರಣೆ ನಂಜಮ್ಮ ತಮ್ಮಣ್ಣಗೌಡರ ದತ್ತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 12ನೇ ಶತಮಾನದಲ್ಲಿ ಶರಣರು ಮಾಡಿದ ಅಂದಿನ ವಚನಗಳನ್ನು ಇವತ್ತಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ 1986ರಲ್ಲಿ ಸುತ್ತೂರಿನ ರಾಜೇಂದ್ರ ಸ್ವಾಮೀಜಿಯವರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅನ್ನು ಹುಟ್ಟುಹಾಕಿದ್ದು, ನೂರಾರು ಶರಣರು ದತ್ತಿಗಳನ್ನು ಇಡುವ ಮೂಲಕ ಶರಣರ ವಚನಗಳನ್ನು ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ತಿಳಿಸುವುದೇ ಶರಣ ಸಾಹಿತ್ಯ ಪರಿಷತ್ತಿನ ಉದ್ದೇಶ ಎಂದರು. ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರು ಎಂ.ಎನ್. ಕುಮಾರಸ್ವಾಮಿ ವಚನ ಕಂಠ ಮಾಡಿದ ವಿದ್ಯಾರ್ಥಿಗಳಿಗೆ ವಚನ ಪುಸ್ತಕ ನೀಡಿದರು.