ಸಾರಾಂಶ
ವಿದ್ಯಾರ್ಥಿಗಳಲ್ಲಿ ನಾಯಕತ್ವದ ಕೌಶಲ್ಯ ಅಭಿವೃದ್ಧಿಪಡಿಸಲು ಮತ್ತು ಪ್ರಾಮಾಣಿಕತೆಯಿಂದ ತಮ್ಮ ಕರ್ತವ್ಯ ನಿರ್ವಹಿಸು
ಕನ್ನಡಪ್ರಭ ವಾರ್ತೆ ಮೈಸೂರು
ಶ್ರೀ ಶಾರದಾ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣ ಸಮಾರಂಭ ಬುಧವಾರ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮೈಸೂರು ಅರಮನೆ ಎಸಿಪಿ ಎಚ್.ಎಂ. ಚಂದ್ರಶೇಖರ್ ಶಾಲೆಯ ವಿದ್ಯಾರ್ಥಿ ಯುವ ನಾಯಕರಿಗೆ ಬ್ಯಾಡ್ಜ್ ವಿತರಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ನಾಯಕತ್ವದ ಕೌಶಲ್ಯ ಅಭಿವೃದ್ಧಿಪಡಿಸಲು ಮತ್ತು ಪ್ರಾಮಾಣಿಕತೆಯಿಂದ ತಮ್ಮ ಕರ್ತವ್ಯ ನಿರ್ವಹಿಸುವ ಅವಕಾಶಗಳನ್ನು ಬಳಸಿಕೊಂಡು ರಾಷ್ಟ್ರದ ಜವಾಬ್ದಾರಿಯುತ ನಾಗರಿಕರಾಗಲು ಸಲಹೆ ನೀಡಿದರು.ಶಾರದಾ ಪಬ್ಲಿಕ್ ಶಾಲೆ ಕಾರ್ಯದರ್ಶಿ ಮಂಜುನಾಥ ಶೀವತ್ಸ ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಎಂ. ಗುರುರಾಜ, ಪ್ರಾಂಶುಪಾಲೆ ಎಂ.ವಿ. ಶಾಲಿನಿ, ಶಾಲೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.