ಸಾರಾಂಶ
ಮುಂಜಾನೆ ಪಂಚಾಮೃತ, ಕ್ಷೀರಾಭಿಷೇಕ, ಶತ ಕಲಶಾಭಿಷೇಕಗಳು ನೆರವೇರಿದವು. ಸಂಜೆ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬೆಳ್ಳಿ ಪಲ್ಲಕಿಯಲ್ಲಿ ಭುಜ ಸೇವೆಯ ಮೂಲಕ ರಥಾರೂಢವಾಗಿದ್ದು ವೈಭವ ಪೂರ್ಣವಾಗಿ ತೇರು ಉತ್ಸವ ನಡೆಯಿತು.
ಕನ್ನಡಪ್ರಭ ವಾರ್ತೆ ಮಂಗಳೂರು
ಕಾಸರಗೋಡಿನ ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ಸಂಪನ್ನಗೊಂಡಿತು. ದೇವಾಲಯದ ರಥಬೀದಿಯಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ಸಂಭ್ರಮದಿಂದ ನಡೆಯಿತು.ಮುಂಜಾನೆ ಪಂಚಾಮೃತ, ಕ್ಷೀರಾಭಿಷೇಕ, ಶತ ಕಲಶಾಭಿಷೇಕಗಳು ನೆರವೇರಿದವು. ಸಂಜೆ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬೆಳ್ಳಿ ಪಲ್ಲಕಿಯಲ್ಲಿ ಭುಜ ಸೇವೆಯ ಮೂಲಕ ರಥಾರೂಢವಾಗಿದ್ದು ವೈಭವ ಪೂರ್ಣವಾಗಿ ತೇರು ಉತ್ಸವ ನಡೆಯಿತು.