ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಸಂಸದ ಜಗದೀಶ ಶೆಟ್ಟರ್‌ ಅ‍ವರು ನವದೆಹಲಿಯಲ್ಲಿ ಭೇಟಿಯಾಗಿ ಬೆಳಗಾವಿಯಲ್ಲಿ ನ್ಯಾಷನಲ್‌ ಇನಸ್ಟಿಟ್ಯೂಟ್ ಆಫ್‌ ಫುಡ್‌ ಟೆಕ್ನಾಲಜಿ ಎಂಟರಪ್ರೆನರಶಿಪ್‌ ಆ್ಯಂಡ್‌ ಮ್ಯಾನೆಜ್‌ಮೆಂಟ್‌ ಸ್ಥಾಪನೆಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಸಂಸದ ಜಗದೀಶ ಶೆಟ್ಟರ್‌ ಅ‍ವರು ನವದೆಹಲಿಯಲ್ಲಿ ಭೇಟಿಯಾಗಿ ಬೆಳಗಾವಿಯಲ್ಲಿ ನ್ಯಾಷನಲ್‌ ಇನಸ್ಟಿಟ್ಯೂಟ್ ಆಫ್‌ ಫುಡ್‌ ಟೆಕ್ನಾಲಜಿ ಎಂಟರಪ್ರೆನರಶಿಪ್‌ ಆ್ಯಂಡ್‌ ಮ್ಯಾನೆಜ್‌ಮೆಂಟ್‌ ಸ್ಥಾಪನೆಗೆ ಮನವಿ ಸಲ್ಲಿಸಿದರು.

ಈ ಸಂಬಂಧ ಕೇಂದ್ರ ಆಹಾರ ಸಂಸ್ಕರಣೆ ಉದ್ಯಮ ಸಚಿವ ಚಿರಾಗ ಪಸ್ವಾನ್‌ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಈ ಪ್ರಸ್ತಾವನೆ ಅನುಮೋದನೆ, ಅಗತ್ಯ ಅನುದಾನ ಮಂಜೂರಾತಿಗಾಗಿ ಕೇಂದ್ರ ಹಣಕಾಸು ಸಚಿವರಲ್ಲಿ ಕೇಂದ್ರ ಆಹಾರ ಸಂಸ್ಕರಣಾ ಉದ್ಯಮ ಸಚಿವಾಲಯ ಮಂಡಿಸುತ್ತಿದೆ. ಇದಕ್ಕೆ ಅನುಮೋದನೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.