ಶೆಟ್ಟರ ಬೆಂಬಲಿಗರು ಮರಳಿ ಬಿಜೆಪಿಗೆ ಸೇರ್ಪಡೆ

| Published : Feb 29 2024, 02:00 AM IST

ಸಾರಾಂಶ

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರೊಂದಿಗೆ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದ ವಿವಿಧ ಮುಖಂಡರು ಹಾಗೂ ಕಾರ್ಯಕರ್ತರು, ಬುಧವಾರ ಬಿಜೆಪಿಗೆ ಮರುಸೇರ್ಪಡೆಯಾದರು.

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರೊಂದಿಗೆ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದ ವಿವಿಧ ಮುಖಂಡರು ಹಾಗೂ ಕಾರ್ಯಕರ್ತರು, ಬುಧವಾರ ಬಿಜೆಪಿಗೆ ಮರುಸೇರ್ಪಡೆಯಾದರು.

ಇಲ್ಲಿನ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶೆಟ್ಟರ ಬೆಂಬಲಿಗರಾದ ಮಲ್ಲಿಕಾರ್ಜುನ ಸಾವಕಾರ, ನಾಗೇಶ ಕಲಬುರ್ಗಿ, ಸತೀಶ ಮಾಡಳ್ಳಿ, ವಿರೂಪಾಕ್ಷಿ ರಾಯನಗೌಡರ, ಸದಾಶಿವ ಚೌಶೆಟ್ಟಿ, ಭಾರತಿ ಟಪಾಲ ಸೇರಿದಂತೆ 109ಕ್ಕೂ ಹೆಚ್ಚು ಮುಖಂಡರು ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದರು. ಶೆಟ್ಟರ, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಪಕ್ಷದ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ ಮುಖಂಡರನ್ನು ಪಕ್ಷಕ್ಕೆ ಬರಮಾಡಿಕೊಂಡರು.