ಅಹಲ್ಯಾಬಾಯಿ ಹೋಳ್ಕರ್ ಸಂಘಕ್ಕೆ ಶಿಲ್ಪ ಚಂದ್ರು ಅಧ್ಯಕ್ಷೆ

| Published : Dec 20 2024, 12:47 AM IST

ಅಹಲ್ಯಾಬಾಯಿ ಹೋಳ್ಕರ್ ಸಂಘಕ್ಕೆ ಶಿಲ್ಪ ಚಂದ್ರು ಅಧ್ಯಕ್ಷೆ
Share this Article
  • FB
  • TW
  • Linkdin
  • Email

ಸಾರಾಂಶ

ಅಹಲ್ಯಾಬಾಯಿ ಹೋಳ್ಕರ್ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶಿಲ್ಪ ಚಂದ್ರು ಹಾಗೂ ಉಪಾಧ್ಯಕ್ಷರಾಗಿ ಕಾವ್ಯ ಆದರ್ಶ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ದೇವರಾಜ್‌ ತಿಳಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಕಾವ್ಯ ಆದರ್ಶ್‌ ಹೊರತುಪಡಿಸಿ ಈ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆಯನ್ನು ಘೋಷಿಸಲಾಯಿತು. ಈ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಂಡಸಿ ಜಗಣ್ಣ ಮಾತನಾಡಿ, ನಿಮ್ಮ ಮೇಲೆ ಸದಸ್ಯರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು ಎಲ್ಲ ಸದಸ್ಯರ ಸಹಕಾರ ಪಡೆದು ಸಂಘನ್ನು ಅತ್ಯುನ್ನತ ಸ್ಥಿತಿಗೆ ತರಬೇಕೆಂದು ಸಲಹೆ ನೀಡಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ನಗರದ ಅಹಲ್ಯಾಬಾಯಿ ಹೋಳ್ಕರ್ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶಿಲ್ಪ ಚಂದ್ರು ಹಾಗೂ ಉಪಾಧ್ಯಕ್ಷರಾಗಿ ಕಾವ್ಯ ಆದರ್ಶ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ದೇವರಾಜ್‌ ತಿಳಿಸಿದ್ದಾರೆ.

13 ಸದಸ್ಯ ಬಲದ ಅಹಲ್ಯಾಬಾಯಿ ಹೋಳ್ಕರ್ ಸಂಘಕ್ಕೆ ಗುರುವಾರ ಚುನಾವಣೆ ನಿಗದಿಯಾಗಿತ್ತು. ನಿಗದಿತ ಸಮಯದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಶಿಲ್ಪ ಚಂದ್ರು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕಾವ್ಯ ಆದರ್ಶ್‌ ಹೊರತುಪಡಿಸಿ ಈ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆಯನ್ನು ಘೋಷಿಸಲಾಯಿತು. ಈ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಂಡಸಿ ಜಗಣ್ಣ ಮಾತನಾಡಿ, ನಿಮ್ಮ ಮೇಲೆ ಸದಸ್ಯರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು ಎಲ್ಲ ಸದಸ್ಯರ ಸಹಕಾರ ಪಡೆದು ಸಂಘನ್ನು ಅತ್ಯುನ್ನತ ಸ್ಥಿತಿಗೆ ತರಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಗಿರಿ ಗೌಡ್ರು, ಭೂದೇಶ್ವರ ಸ್ವಾಮಿ ಒಡೆಯರ್, ಕನಕ ನೌಕರ ಸಂಘದ ಮಾಜಿ ಅಧ್ಯಕ್ಷ ಕಾವಲಿರಪ್ಪ, ಜಯಣ್ಣ, ಸುಧಾ ಮಂಜುನಾಥ್‌, ನಿಜಗುಣ, ಇತರರು ಹಾಜರಿದ್ದರು.