ಶಿಮಂತೂರಿನ ಶ್ರೀ ಶಾರದಾ ಶಾಲೆ ವಾರ್ಷಿಕೋತ್ಸವ

| Published : Dec 19 2024, 12:32 AM IST

ಸಾರಾಂಶ

ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕನ್ನಡಪ್ರಭವಾರ್ತೆ ಮೂಲ್ಕಿ

ವಿದ್ಯಾರ್ಥಿಗಳ ಕಠಿಣ ಪರಿಶ್ರಮ, ಸಾಧನೆಗಳನ್ನು ಗುರುತಿಸಲು ವಾರ್ಷಿಕೋತ್ಸವ ಪೂರಕ ಎಂದು ಶಿಮಂತೂರಿನ ಶ್ರೀ ಶಾರದಾ ಸೊಸೈಟಿಯ ಅಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಹೇಳಿದರು.ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ಜರುಗಿದ ಶಾಲಾ ವಾರ್ಷಿಕೋತ್ಸವದ ಬಹುಮಾನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೆಹಲಿ ಲಿ. ಕರ್ನಾಟಕದ ವಿಭಾಗೀಯ ಮುಖ್ಯಸ್ಥ ವೇದವ್ಯಾಸ ಭಟ್ ಭಾಗವಹಿಸಿ ಮಾತನಾಡಿ, ಪ್ರಶಸ್ತಿಗಳು ಉತ್ತಮ ನಡವಳಿಕೆಯನ್ನು ಪ್ರೋತ್ಸಾಹಿಸಲು ಮತ್ತು ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಲು ಒಂದು ಮಾರ್ಗವಾಗಿದೆಯೆಂದು ಹೇಳಿದರು. ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಶಾಲಾ ಹಳೆ ವಿದ್ಯಾರ್ಥಿ ಪುರುಷೋತ್ತಮ ಶೆಟ್ಟಿ ಮಜಲಗುತ್ತು, ಉದ್ಯಮಿ ಪ್ರದೀಪ್ ಶೆಟ್ಟಿ ಮಜಲಗುತ್ತು, ಶಿಮಂತೂರಿನ ಶ್ರೀ ಶಾರದಾ ಸೊಸೈಟಿ ಕಾರ್ಯದರ್ಶಿ ಪುರಂದರ ಶೆಟ್ಟಿಗಾರ್, ಕೋಶಾಧಿಕಾರಿ ಕೆ. ಭುವನಾಭಿರಾಮ ಉಡುಪ, ನಿರ್ದೇಶಕ ಸುರೇಶ್ ರಾವ್ ನಿರಾಳಿಕೆ, ಪ್ರಾಂಶುಪಾಲ ಜಿತೇಂದ್ರ ವಿ ರಾವ್ ಉಪಸ್ಥಿತರಿದ್ದರು.ಶಾಲಾ ಸಂಚಾಲಕ ದೇವಪ್ರಸಾದ್ ಪುನರೂರು ಸ್ವಾಗತಿಸಿ, ಪ್ರಸ್ತಾವನೆಗೈದರು. ಸಹ ಶಿಕ್ಷಕಿ ಐಶ್ವರ್ಯ ವಂದಿಸಿದರು. ಉಪ ಪ್ರಾಂಶುಪಾಲೆ ದಿವ್ಯ ಟಿ ಶೆಟ್ಟಿ ನಿರೂಪಿಸಿದರು. ಸಹ ಶಿಕ್ಷಕಿ ಅಮಿತಾ, ದೀಪಿಕಾ ಹಾಗೂ ಶರ್ಮಿಳಾ ಬಹುಮಾನ ಪಟ್ಟಿ ವಾಚಿಸಿದರು.