ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ಶಾಲಾ ವಾರ್ಷಿಕೋತ್ಸವ ಇತ್ತೀಚೆಗೆ ನೆರವೇರಿತು.

ಮೂಲ್ಕಿ: ಜೀವನದಲ್ಲಿ ಶಿಸ್ತು, ಪರಿಶ್ರಮ ಹಾಗೂ ಮೌಲ್ಯಾಧಾರಿತ ಶಿಕ್ಷಣ ಯಶಸ್ಸಿನ ದಾರಿಯಾಗಿದ್ದು, ಶಿಕ್ಷಣವು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿರಬೇಕೆಂದು ನವೋದಯ ಕನ್ನಡ ಸೇವಾ ಸಂಘ ಮುಂಬೈನ ಅಧ್ಯಕ್ಷ ದಯಾನಂದ ಶೆಟ್ಟಿ ಎಳತ್ತೂರು ಗುತ್ತು ಹೇಳಿದರು.ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ಜರಗಿದ ಶಾಲಾ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಶಾರದಾ ಸೊಸೈಟಿಯ ಅಧ್ಯಕ್ಷ ಧರ್ಮದರ್ಶಿ ಡಾ ಹರಿಕೃಷ್ಣ ಪುನರೂರು ಮಾತನಾಡಿ, ಇಂದಿನ ಪೈಪೋಟಿಯ ಯುಗದಲ್ಲಿ ಮಕ್ಕಳಲ್ಲಿ ಕೌಶಲ್ಯ, ಮೌಲ್ಯ, ಶಿಸ್ತು ಮತ್ತು ಸ್ವಯಂ ವಿಶ್ವಾಸವನ್ನು ಬೆಳೆಸುವುದು ಅತ್ಯಗತ್ಯವಾಗಿದ್ದು ಪಠ್ಯ ಜ್ಞಾನಕ್ಕಿಂತಲೂ ಜೀವನ ಮೌಲ್ಯವು ಮಹತ್ವವೆಂದು ಹೇಳಿದರು.

ಈ ಸಂದರ್ಭ ಕಳೆದ ಶೈಕ್ಷಣಿಕ ವರ್ಷದಲ್ಲಿ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ 3 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಾಲಾ ಹಿರಿಯ ವಿದ್ಯಾರ್ಥಿ ಸಿ.ಎ ಪಾಂಡುರಂಗ, ಶ್ರೀ ಶಾರದ ಸೊಸೈಟಿಯ ಕೋಶಾಧಿಕಾರಿ ಕೆ. ಭುವನಾಭಿರಾಮ ಉಡುಪ, ಕಾರ್ಯದರ್ಶಿ ಪುರಂದರ ಡಿ. ಶೆಟ್ಟಿಗಾರ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಸುಮನ ಉಪಸ್ಥಿತರಿದ್ದರು.ಶಾಲಾ ಸಂಚಾಲಕ ದೇವಪ್ರಸಾದ್ ಪುನರೂರು ಸ್ವಾಗತಿಸಿ, ಪ್ರಸ್ತಾವನೆಗ್ಯೆದರು. ಶಾಲಾ ಪ್ರಾಚಾರ್ಯ ಜಿತೇಂದ್ರ ವಿ ರಾವ್ ವಾರ್ಷಿಕ ವರದಿ ವಾಚಿಸಿದರು. ಸಹ ಶಿಕ್ಷಕಿ ದೀಕ್ಷಿತ ಕಾರ್ಯಕ್ರಮ ನಿರೂಪಿಸಿದರು, ನಿಶ್ಮಿತಾ ವಂದಿಸಿದರು.