ಶಿಮಂತೂರು ದೇವಳ ಕೆರೆ ದೀಪೋತ್ಸವ ಸಂಪನ್ನ

| Published : Mar 18 2025, 12:34 AM IST

ಸಾರಾಂಶ

ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ದೇವರ ಬಾಕಿ ಮಾರು, ಕೆರೆ ದೀಪೋತ್ಸವ ಕ್ಷೇತ್ರದ ತಂತ್ರಿಗಳಾದ ವೇದವ್ಯಾಸ ತಂತ್ರಿ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.

ಕನ್ನಡಪ್ರಭವಾರ್ತೆ ಮೂಲ್ಕಿ

ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ದೇವರ ಬಾಕಿ ಮಾರು, ಕೆರೆ ದೀಪೋತ್ಸವ ಕ್ಷೇತ್ರದ ತಂತ್ರಿಗಳಾದ ವೇದವ್ಯಾಸ ತಂತ್ರಿ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.

ರಾತ್ರಿ ಶ್ರೀ ದೇವರ ಉತ್ಸವಬಲಿ, ಚಂದ್ರಮಂಡಲ ರಥೋತ್ಸವ, ವಸಂತ ಮಂಟಪ ಪೂಜೆ, ಬಾಕಿಮಾರು ದೀಪೋತ್ಸವ ಕೆರೆ ದೀಪೋತ್ಸವ ಸುಡು ಮದ್ದು ಪ್ರದರ್ಶನ ನಡೆಯಿತು.

ಈ ಸಂದರ್ಭ ಮಾಜಿ ಸಚಿವ ಅಭಯ ಚಂದ್ರ ಜೈನ್, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ದೇವಸ್ಥಾನದ ಆಡಳಿತ ಮೊಕ್ತೇಸರ ಉದಯಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರೂಪಾ ಭಟ್, ಶಾಂತರಾಮ ಶೆಟ್ಟಿ ತೆಂಗಾಳಿ, ಶಶಿಕಲಾ, ನಂದನ ಶೆಟ್ಟಿ, ಜಯಕರ ಶೆಟ್ಟಿ ಮುಂಬೈ, ಮೋಹನ್ ಕೋಟ್ಯಾನ್, ರಘುರಾಮ ಶೆಟ್ಟಿ, ಬಾಲಕೃಷ್ಣ ಶೆಟ್ಟಿ ಚಂದ್ರಹಾಸ ಸುವರ್ಣ, ವಿಶ್ವನಾಥ ಶೆಟ್ಟಿ, ಸುರೇಶ್ ಶೆಟ್ಟಿ ಹರೀಶ್ ಶೆಟ್ಟಿ, ಸುಧೀರ್ ಶೆಟ್ಟಿ, ಕಿರಣ್, ಗೋಪಾಲ್ ಶಿಮಂತೂರು, ಮತ್ತಿತರರು ಉಪಸ್ಥಿತರಿದ್ದರು.

ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಂಗಳವಾರ ಮಹಾರಥೋತ್ಸವ ನಡೆಯಲಿದೆ.