ಶಿಮಂತೂರು: ಕೆಸರ್‌ಡೊಂಜಿ ದಿನ ಕಾರ್ಯಕ್ರಮ ಉದ್ಘಾಟನೆ

| Published : Jun 23 2025, 11:47 PM IST

ಸಾರಾಂಶ

ಮೂಲ್ಕಿ ನಗರ ಪಂಚಾಯಿತಿ ಅಧ್ಯಕ್ಷ ಸತೀಶ್ ಅಂಚನ್ ಉದ್ಘಾಟಿಸಿದರು. ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದ ಅರ್ಚಕ ಪುರುಷೋತ್ತಮ ಭಟ್ ಆಶೀರ್ವಚನ ನೀಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮಾತನಾಡಿ ಕೃಷಿಗೆ ಪೂರಕವಾಗಿ ಗ್ರಾಮದಲ್ಲಿ ಯುವಕ ಮಂಡಲದ ಸೇವಾ ಕಾರ್ಯಕ್ರಮ ಶ್ಲಾಘನೀಯ ಎಂದು ಹೇಳಿದರು.

ಕನ್ನಡಪ್ರಭವಾರ್ತೆ ಮೂಲ್ಕಿ

ಹಿಂದಿನ ಕಷ್ಟಕಾಲದಲ್ಲಿ ಕೃಷಿಯನ್ನು ಅವಲಂಬಿಸಿದ್ದು ಕೃಷಿಯ ಬಗ್ಗೆ ಇಂದಿನ ಯುವ ಜನಾಂಗಕ್ಕೆ ತಿಳಿಸುವ ಕಾರ್ಯವಾಗಬೇಕು. ಕೆಸರುಗದ್ದೆ ಕ್ರೀಡಾಕೂಟದ ಮೂಲಕ ಗ್ರಾಮದಲ್ಲಿ ಒಗ್ಗಟ್ಟು ಮೂಡಿಸುವ ಕಾರ್ಯ ಸಾಧ್ಯ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

ಶಿಮಂತೂರು ಯುವಕ ಮಂಡಲದ ಆಶ್ರಯದಲ್ಲಿ ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದ ಬಳಿ ನಡೆದ ಚತುರ್ಥ ವರ್ಷದ ಕೆಸರ್ ಡೊಂಜಿ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮೂಲ್ಕಿ ನಗರ ಪಂಚಾಯಿತಿ ಅಧ್ಯಕ್ಷ ಸತೀಶ್ ಅಂಚನ್ ಉದ್ಘಾಟಿಸಿದರು. ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದ ಅರ್ಚಕ ಪುರುಷೋತ್ತಮ ಭಟ್ ಆಶೀರ್ವಚನ ನೀಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮಾತನಾಡಿ ಕೃಷಿಗೆ ಪೂರಕವಾಗಿ ಗ್ರಾಮದಲ್ಲಿ ಯುವಕ ಮಂಡಲದ ಸೇವಾ ಕಾರ್ಯಕ್ರಮ ಶ್ಲಾಘನೀಯ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅತಿಕಾರಿಬೆಟ್ಟು ಗ್ರಾ.ಪಂ.ಉಪಾಧ್ಯಕ್ಷ ಮನೋಹರ ಕೋಟ್ಯಾನ್ ವಹಿಸಿದ್ದು ಕಾರ್ಯಕ್ರಮದಲ್ಲಿ ಹಿರಿಯ ಕೃಷಿಕರಾದ ಭುಜಂಗ ಶೆಟ್ಟಿ ಪರೆಂಕಿಲ, ಕಾಂತಪ್ಪ ಪೂಜಾರಿ ಶೇಡಿಕಟ್ಟ ಹಾಗೂ ಶೈಕ್ಷಣಿಕ ಸಾಧಕಿ ಹರ್ಷಿತಾ ಆರ್. ಶೆಟ್ಟಿ ಅವರನ್ನು ಗೌರವಿಸಲಾಯಿತು. ಮೂಲ್ಕಿಯ ಸುಧಾಮ ಫೌಂಡೇಶನ್ ಅಧ್ಯಕ್ಷ ಸುನಿಲ್ ಆಳ್ವ, ಉದ್ಯಮಿ ಕಮಲಾಕ್ಷ ಬಡಗುಹಿತ್ಲು, ಶಿಕ್ಷಕಿ ಕಾಮೇಶ್ವರಿ ವಿಷ್ಣುಮೂರ್ತಿ ಭಟ್, ಮಹಿಳಾ ಭಜನಾ ಮಂಡಳಿ ಅಧ್ಯಕ್ಷೆ ರೂಪ ವಿಷ್ಣುಮೂರ್ತಿ ಭಟ್, ಯುವಕ ಮಂಡಲದ ಅಧ್ಯಕ್ಷ ದೀಪಕ್ ಮತ್ತಿತರರು ಉಪಸ್ಥಿತರಿದ್ದರು. ಗೋಪಾಲ್ ಶಿಮಂತೂರು ವಂದಿಸಿದರು. ನವೀನ್ ಶೆಟ್ಟಿ ಎಡ್ಮೆಮಾರ್ ನಿರೂಪಿಸಿದರು. ಬಳಿಕ ಚತುರ್ಥ ವರ್ಷದ ಕೆಸರ್ ಡೊಂಜಿ ದಿನ ಕಾರ್ಯಕ್ರಮ ನಡೆಯಿತು.