ಶಿಕ್ಷಣ ಕ್ಷೇತ್ರದಲ್ಲಿ ಸಾಮಾಜಿಕ ಹೊಣೆಗಾರಿಕೆಯನ್ನು ಮೆರೆದಿರುವ ಬೆಂಗಳೂರಿನ ಶಿನ್ವಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ ದೇವಿಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸುಮಾರು ₹4.5 ಲಕ್ಷ ಮೌಲ್ಯದ ವಿವಿಧ ಶೈಕ್ಷಣಿಕ ಸಾಮಗ್ರಿಗಳನ್ನು ಕೊಡುಗೆ ನೀಡಿ ಸಮಾಜಮುಖಿ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹಾಲಮೂರ್ತಿ ಶ್ಲಾಘಿಸಿದ್ದಾರೆ.

- ದೇವಿಕೆರೆ ಶಾಲೆಯಲ್ಲಿ ಪೀಠೋಪಕರಣ ವಿತರಣೆ ಕಾರ್ಯಕ್ರಮದಲ್ಲಿ ಬಿಇಒ ಹಾಲಮೂರ್ತಿ - - -

ಕನ್ನಡಪ್ರಭ ವಾರ್ತೆ ಜಗಳೂರು

ಶಿಕ್ಷಣ ಕ್ಷೇತ್ರದಲ್ಲಿ ಸಾಮಾಜಿಕ ಹೊಣೆಗಾರಿಕೆಯನ್ನು ಮೆರೆದಿರುವ ಬೆಂಗಳೂರಿನ ಶಿನ್ವಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ ದೇವಿಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸುಮಾರು ₹4.5 ಲಕ್ಷ ಮೌಲ್ಯದ ವಿವಿಧ ಶೈಕ್ಷಣಿಕ ಸಾಮಗ್ರಿಗಳನ್ನು ಕೊಡುಗೆ ನೀಡಿ ಸಮಾಜಮುಖಿ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹಾಲಮೂರ್ತಿ ಶ್ಲಾಘಿಸಿದರು.

ತಾಲೂಕಿನ ದೇವಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿನ್ವಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯಿಂದ ಡೆಸ್ಕ್‌, ಕುರ್ಚಿ, ಅಲ್ಮೇರಾ, ಟೇಬಲ್ ಮತ್ತಿತರ ವಸ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಇಂತಹ ಸಹಾಯಗಳು ಬಹಳ ಅಗತ್ಯವಾಗಿವೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಇದು ಉತ್ತೇಜನ ನೀಡುತ್ತದೆ ಎಂದು ತಿಳಿಸಿದರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾದ ಎಂ.ಮಂಜುಳಾ ಮಾತನಾಡಿ, ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಒದಗಿಸುವ ಉದ್ದೇಶದಿಂದ ಶಿನ್ವಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ ವತಿಯಿಂದ 35 ಡೆಸ್ಕ್‌ಗಳು, 10 ಕುರ್ಚಿಗಳು, 82 ತಟ್ಟೆಗಳು ಮತ್ತು ಕಪ್ಗಳು, 2 ಅಲ್ಮೇರಾಗಳು, 4 ತರಗತಿಗಳಿಗೆ ಟೇಬಲ್‌ಗಳು ಹಾಗೂ ಒಂದು ಕಚೇರಿ ಟೇಬಲ್‌ ನೀಡಲಾಗಿದೆ ಎಂದರು.

ಇವುಗಳ ಜೊತೆಗೆ 82 ವಿದ್ಯಾರ್ಥಿಗಳಿಗೆ ಶಾಲಾ ಯೂನಿಫಾರ್ಮ್‌ಗಳು ಹಾಗೂ 42 ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್‌ಗಳನ್ನು ವಿತರಿಸಲಾಯಿತು. ಕಂಪನಿಯ ಈ ನೆರವು ಶಾಲೆಯ ಮೂಲಸೌಕರ್ಯಗಳನ್ನು ಹೆಚ್ಚಿಸಲು ಸಹಕಾರಿಯಾಗಿವೆ ಎಂದರು.

ಶಾಲೆ ವತಿಯಿಂದ ಶಿನ್ವಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ ಪ್ರತಿನಿಧಿಗಳನ್ನು ಸನ್ಮಾನಿಸಲಾಯಿತು. ಕ್ಷೇತ್ರ ಸಮನ್ವಯ ಅಧಿಕಾರಿ ಡಿ.ಡಿ.ಹಾಲಪ್ಪ, ಸಹ ಶಿಕ್ಷಕ ಆಂಜನೇಯ, ಶಿಕ್ಷಕರಾದ ಎಸ್.ಬಸಮ್ಮ, ಮಂಜುಳ ಆರ್.ಎಚ್., ಮಹಾಂತೇಶ್, ಎಸ್‌ಡಿಎಂಸಿ ಅಧ್ಯಕ್ಷ ಗುರುಸಿದ್ದಪ್ಪ, ಮಲ್ಲಿಕಾರ್ಜುನಪ್ಪ ಮತ್ತು ಸದಸ್ಯರು, ಕಂಪನಿಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

- - -

-11ಜೆ.ಜಿ.ಎಲ್.1.ಜೆಪಿಜಿ:

ದೇವಿಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ₹4.5 ಲಕ್ಷ ಮೌಲ್ಯದ ವಿವಿಧ ಶೈಕ್ಷಣಿಕ ಸಾಮಗ್ರಿಗಳನ್ನು ನೀಡಿದ ಶಿನ್ವಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ ಪ್ರತಿನಿಧಿಗಳನ್ನು ಶಾಲೆ ವತಿಯಿಂದ ಸನ್ಮಾನಿಸಲಾಯಿತು.