ಎಡಕುಮರಿ ರೈಲ್ವೆ ನಿಲ್ದಾಣದ ಬಳಿ ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿ ರೈಲ್ವೆಹಳಿಗಳ ಮೇಲೆ ಭಾರಿ ಗಾತ್ರದ ಬಂಡೆಗಳು ಹಾಗೂ ಮಣ್ಣು ಕುಸಿದಿದ್ದರಿಂದ ಈ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ಏಳು ರೈಲುಗಳ ಸಂಚಾರವನ್ನು ಅನಿರ್ದಿಷ್ಟ ಅವಧಿಗೆ ತಡೆಹಿಡಿಯಲಾಗಿತ್ತು. ಭಾನುವಾರ ರಾತ್ರಿಯಿಂದಲೇ ಮೈಸೂರಿನಿಂದ ಆಗಮಿಸಿದ ಸುಮಾರು ಇನ್ನೂರು ಕಾರ್ಮಿಕರ ತಂಡ ಎರಡು ಪಾಳಿಯಲ್ಲಿ ನಿರಂತರವಾಗಿ ಎರಡು ದಿನಗಳ ಕಾರ್ಯಾಚರಣೆ ನಡೆಸಿ ಮಂಗಳವಾರ ಸಂಜೆ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಮಣ್ಣು ಹಾಗೂ ಕಲ್ಲುಗಳನ್ನು ತೆರವುಗೊಳಿಸಿ ರೈಲುಗಳ ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಸಕಲೇಶಪುರ
ಶಿರಾಡಿಘಾಟ್‌ನ ಎಡಕುಮರಿ ಪ್ರದೇಶದಲ್ಲಿ ರೈಲ್ವೆ ಹಳಿಯ ಮೇಲೆ ಭೂಕುಸಿತದಿದ್ದ ರದ್ದುಗೊಂಡಿದ್ದ ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ಎರಡು ದಿನಗಳ ನಂತರ ಮರು ಆರಂಭವಾಗಿದೆ.ಭಾನುವಾರ ರಾತ್ರಿ ೯ ಗಂಟೆಯ ವೇಳೆ ಎಡಕುಮರಿ ರೈಲ್ವೆ ನಿಲ್ದಾಣದ ಬಳಿ ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿ ರೈಲ್ವೆಹಳಿಗಳ ಮೇಲೆ ಭಾರಿ ಗಾತ್ರದ ಬಂಡೆಗಳು ಹಾಗೂ ಮಣ್ಣು ಕುಸಿದಿದ್ದರಿಂದ ಈ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ಏಳು ರೈಲುಗಳ ಸಂಚಾರವನ್ನು ಅನಿರ್ದಿಷ್ಟ ಅವಧಿಗೆ ತಡೆಹಿಡಿಯಲಾಗಿತ್ತು. ಭಾನುವಾರ ರಾತ್ರಿಯಿಂದಲೇ ಮೈಸೂರಿನಿಂದ ಆಗಮಿಸಿದ ಸುಮಾರು ಇನ್ನೂರು ಕಾರ್ಮಿಕರ ತಂಡ ಎರಡು ಪಾಳಿಯಲ್ಲಿ ನಿರಂತರವಾಗಿ ಎರಡು ದಿನಗಳ ಕಾರ್ಯಾಚರಣೆ ನಡೆಸಿ ಮಂಗಳವಾರ ಸಂಜೆ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಮಣ್ಣು ಹಾಗೂ ಕಲ್ಲುಗಳನ್ನು ತೆರವುಗೊಳಿಸಿ ರೈಲುಗಳ ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ.