ಶಿರೂರು ಮಠದ ಪರ್ಯಾಯ: ಮುಂಬೈ ಕನ್ನಡಿಗರಿಗೆ ಆಹ್ವಾನ

| Published : Sep 11 2025, 12:04 AM IST

ಶಿರೂರು ಮಠದ ಪರ್ಯಾಯ: ಮುಂಬೈ ಕನ್ನಡಿಗರಿಗೆ ಆಹ್ವಾನ
Share this Article
  • FB
  • TW
  • Linkdin
  • Email

ಸಾರಾಂಶ

ಸಭೆಯಲ್ಲಿ ಶಿರೂರು ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಿ, ಶಿರೂರು ಮಠದ ಭಾವೀ ಪರ್ಯಾಯ ಮಹೋತ್ಸವದ ಯಶಸ್ಸಿಗೆ ಕರ್ಮಭೂಮಿ ಮುಂಬೈಯಲ್ಲಿ ಬದುಕು ಕಟ್ಟಿಕೊಂಡಿರುವ ತುಳುನಾಡಿನ ಬಂಧುಗಳು ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಉಡುಪಿಮುಂದಿನ ಜನವರಿಯಲ್ಲಿ ನಡೆಯಲಿರುವ ಶಿರೂರು ಮಠದ ಶ್ರೀ ವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಮುಂಬೈ ಸಾಂತಾಕ್ರೂಜ್‌ನಲ್ಲಿರುವ ಪೇಜಾವರ ಮಠದಲ್ಲಿ ಮಂಗಳವಾರ ಮುಂಬೈ ಮಹಾನಗರದ ಬಂಧುಗಳೊಂದಿಗೆ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು.ಸಭೆಯಲ್ಲಿ ಶಿರೂರು ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಿ, ಶಿರೂರು ಮಠದ ಭಾವೀ ಪರ್ಯಾಯ ಮಹೋತ್ಸವದ ಯಶಸ್ಸಿಗೆ ಕರ್ಮಭೂಮಿ ಮುಂಬೈಯಲ್ಲಿ ಬದುಕು ಕಟ್ಟಿಕೊಂಡಿರುವ ತುಳುನಾಡಿನ ಬಂಧುಗಳು ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿ, ಎಲ್ಲರನ್ನೂ ತಮ್ಮ ಪರ್ಯಾಯೋತ್ಸವಕ್ಕೆ ಆಹ್ಪಾನಿಸಿದರು.

ಸಭೆಯಲ್ಲಿ ಶ್ರೀಮಠದ ದಿವಾನರಾದ ಡಾ. ಉದಯ ಕುಮಾರ್ ಸರಳತ್ತಾಯ, ಕಾಪು ಶಾಸಕ ಸುರೇಶ್ ಶೆಟ್ಟಿ, ಪರ್ಯಾಯ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ ಹೆಗ್ಡೆ, ಸಂಚಾಲಕ ಕೆ. ವಿಷ್ಣುಮೂರ್ತಿ ಆಚಾರ್ಯ, ಕಾರ್ಯದರ್ಶಿ ಮೋಹನ್ ಭಟ್, ಪರ್ಯಾಯ ಸ್ವಾಗತ ಸಮಿತಿಯ ಪದಾಧಿಕಾರಿಗಳು, ಮುಂಬೈ ಮಹಾನಗರದ ವಿವಿಧ ಸಮಾಜದ ಮುಖಂಡರು, ಉದ್ಯಮಿಗಳು ಹಾಗೂ ಶ್ರೀಮಠದ ಭಕ್ತರು ಉಪಸ್ಥಿತರಿದ್ದರು.