ಶಿರೂರು ಪರ್ಯಾಯ: ಜಿಲ್ಲಾಡಳಿತದ ಸಭೆ

| Published : Nov 05 2025, 03:15 AM IST

ಶಿರೂರು ಪರ್ಯಾಯ: ಜಿಲ್ಲಾಡಳಿತದ ಸಭೆ
Share this Article
  • FB
  • TW
  • Linkdin
  • Email

ಸಾರಾಂಶ

ಶಿರೂರು ಮಠದ ಭಾವಿ ಪರ್ಯಾಯ ಮಹೋತ್ಸವದ ಪೂರ್ವಭಾವಿ ಸಿದ್ಧತೆ ಕಾರ್ಯಗಳ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಪದಾಧಿಕಾರಿಗಳ ಸಭೆ ಮಂಗಳವಾರ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಶಿರೂರು ಮಠದ ಭಾವಿ ಪರ್ಯಾಯ ಮಹೋತ್ಸವದ ಪೂರ್ವಭಾವಿ ಸಿದ್ಧತೆ ಕಾರ್ಯಗಳ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಪದಾಧಿಕಾರಿಗಳ ಸಭೆ ಮಂಗಳವಾರ ನಡೆಯಿತು.ಸಭೆಯಲ್ಲಿ ಶಿರೂರು ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಅತ್ಯಂತ ಸುವ್ಯವಸ್ಥಿತವಾಗಿ ನಾಡಹಬ್ಬದ ರೀತಿಯಲ್ಲಿ ಪರ್ಯಾಯ ಮಹೋತ್ಸವ ನಡೆಸುವ ಬಗ್ಗೆ ಮಾಹಿತಿ ನೀಡಿ, ಜಿಲ್ಲಾಡಳಿತದ ಸಂಪೂರ್ಣ ಸಹಕಾರ ಕೋರಿದರು.ಸಭೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ್, ಉಡುಪಿ ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಶ್ರೀಮಠದ ದಿವಾನರಾದ ಡಾ. ಉದಯ ಕುಮಾರ್ ಸರಳತ್ತಾಯ, ಪರ್ಯಾಯ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ ಹೆಗ್ಡೆ, ಹೊರೆ ಕಾಣಿಕೆ ಸಮಿತಿ ಸಂಚಾಲಕ ಬೈಕಾಡಿ ಸುಪ್ರಸಾದ ಶೆಟ್ಟಿ, ಕಾರ್ಯದರ್ಶಿ ಮೋಹನ್ ಭಟ್, ಪ್ರಮುಖರಾದ ಕಿರಣ್ ಕುಮಾರ್ ಬೈಲೂರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.