ಸಾರಾಂಶ
ಮೂಡುಬಿದರೆಯ ಆಳ್ವಾಸ್ ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕಿ ಡಾ. ಗೀತಾ ಮಾರ್ಕಾಂಡೇಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಆಟಿ ತಿಂಗಳಲ್ಲಿ ನಮ್ಮ ಹಿರಿಯರು ಸೇವಿಸುತ್ತಿದ್ದ ಪ್ರತಿಯೊಂದು ತಿನಿಸುಗಳ ಬಗ್ಗೆ ಹಾಗೂ ಆಚಾರ ವಿಚಾರಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.
ಕನ್ನಡಪ್ರಭ ವಾರ್ತೆ ಕಾಪು
ಇಲ್ಲಿನ ಶಿರ್ವ ಮಹಿಳಾ ಮಂಡಲ ವತಿಯಿಂದ ಆಟಿ ವೈವಿಧ್ಯ ಕಾರ್ಯಕ್ರಮ ಇತ್ತೀಚೆಗೆ ಶಿರ್ವ ಮಹಿಳಾ ಸೌಧದಲ್ಲಿ ನಡೆಯಿತು. ಮೂಡುಬಿದರೆಯ ಆಳ್ವಾಸ್ ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕಿ ಡಾ. ಗೀತಾ ಮಾರ್ಕಾಂಡೇಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಆಟಿ ತಿಂಗಳಲ್ಲಿ ನಮ್ಮ ಹಿರಿಯರು ಸೇವಿಸುತ್ತಿದ್ದ ಪ್ರತಿಯೊಂದು ತಿನಿಸುಗಳ ಬಗ್ಗೆ ಹಾಗೂ ಆಚಾರ ವಿಚಾರಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.ಮಹಿಳಾ ಮಂಡಲ ಅಧ್ಯಕ್ಷೆ ಡಾ. ಸ್ಫೂರ್ತಿ ಪಿ. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಗುರು ಪೂರ್ಣಿಮಾ ಹಿನ್ನೆಲೆಯಲ್ಲಿ ಶಿರ್ವದ ಹಿರಿಯ ಶಿಕ್ಷಕಿ ಲಿಲ್ಲಿ ನಜರತ್ ಅವರನ್ನು ಗೌರವಿಸಲಾಯಿತು. ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿರುವ ಮಹಿಳಾ ಮಂಡಲದ ಸದಸ್ಯರ ಮಕ್ಕಳನ್ನು ಅಭಿನಂದಿಸಲಾಯಿತು.
ಶಿರ್ವ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ವಿಠಲ್ ಅಂಚನ್, ಮಹಿಳಾ ಮಂಡಲದ ಗೌರವ ಸಲಹೆಗಾರರಾದ ಗೀತಾ ವಾಗ್ಳೆ, ಉಪಾಧ್ಯಕ್ಷೆ ಗೀತಾ ಮೂಲ್ಯ, ಜೊತೆ ಕಾರ್ಯದರ್ಶಿ ಗೌರಿ ಶೆಣೈ, ಉಪ ಸಮಿತಿಯ ಸದಸ್ಯರಾದ ವಿನಯಾ ಕುಂದರ್, ಜ್ಯೋತಿ ಸುಧೀರ್ ಶೆಟ್ಟಿ, ಸುನೀತಾ ಪೂಜಾರಿ, ಶ್ವೇತಾ ಗಿರೀಶ್ ಉಪಸ್ಥಿತರಿದ್ದರು.ಮಹಿಳಾ ಮಂಡಲದ ಗೌರವಾಧ್ಯಕ್ಷೆ ಬಬಿತಾ ಜಗದೀಶ್ ಅರಸ್ ಸ್ವಾಗತಿಸಿದರು. ಜಯಶ್ರೀ ಶೆಟ್ಟಿ ಮಟ್ಟಾರು ಹಾಗೂ ಪುಷ್ಪಾ ಆಚಾರ್ಯ ಪ್ರಾರ್ಥಿಸಿದರು. ಕಾರ್ಯದರ್ಶಿ ಐರಿನ್ ಪಿಂಟೋ ವರದಿ ವಾಚಿಸಿದರು. ವಸಂತಿ ಗೋಪಾಲ್ ವಂದಿಸಿದರು. ಜಯಶ್ರೀ ಜಯಪಾಲ್ ಶೆಟ್ಟಿ ಹಾಗೂ ದೀಪಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.